11
April, 2026

A News 365Times Venture

11
Saturday
April, 2026

A News 365Times Venture

ಸಂವಿಧಾನದ ಆಶಯ ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು- ಸಿ.ಎಂ.ಸಿದ್ದರಾಮಯ್ಯ

Date:

ಬೀದರ್ ಏಪ್ರಿಲ್,11,2026 (www.justkannada.in): ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು. ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ ಹೆಚ್ಚಾಗಿದ್ದಾರೆ. ಈ ಮೌಢ್ಯ ಆಚರಿಸುವವರೆಲ್ಲಾ ವಿದ್ಯಾವಂತರೇ ಎನ್ನುವುದು ಬೇಸರದ ಸಂಗತಿ. ಆದ್ದರಿಂದ ವೈಚಾರಿಕತೆ ಇರುವ ವೈಜ್ಞಾನಿಕ ಶಿಕ್ಷಣ ಪದ್ಧತಿ ಅಗತ್ಯ.. ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದರು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದ್ದೇವೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದರು.

ಜಾತಿ ಸಮಾಜ ಚಲನೆ ಇಲ್ಲದ್ದು.‌ ಸಮಾಜವನ್ನು ಚಲನಶೀಲಗೊಳಿಸಲು ವಸ್ತುನಿಷ್ಠವಾದ ವೃತ್ತಿಪರತೆಯನ್ನು ಪತ್ರಕರ್ತರು ಪಾಲಿಸಬೇಕು ಎಂದರು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌ ಎಂದರು.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ ಎಂದರು.

ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್  ಖಂಡ್ರೆ, ಸಚಿವರುಗಳಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ  ಆನಂದ್ ದೇವಪ್ಪ,  ಸಮ್ಮೇಳನದ ಪ್ರಧಾನ ಭಾಷಣಕಾರರಾಗಿರುವ ಹಿರಿಯ ಸಂಪಾದಕರಾದ ವಿಶ್ವೇಶ್ವರ ಭಟ್, ಸಂಸದರಾದ ಸಾಗರ್ ಖಂಡ್ರೆ, ಮಾಜಿ ಸಚಿವರಾಜಶೇಖರ್ ಪಾಟೀಲ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.‌

ಹಾರಕುಡ ಹಿರೇಮಠ ಸಂಸ್ಥಾನದ ಡಾ.ಚನ್ನವೀರ ಶಿವಾಚಾರ್ಯರು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು ಇವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ರಾಜ್ಯ ಮತ್ತು‌ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.‌

ಉಚಿತ ಬಸ್ ಪಾಸ್: ನಿಯಮಗಳ ತೊಂದರೆ ನಿವಾರಣೆ: ಸಿಎಂ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

Key words: Journalists, implement intentions, Constitution, CM Siddaramaiah

The post ಸಂವಿಧಾನದ ಆಶಯ ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು- ಸಿ.ಎಂ.ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ

ಕೊಡಗು,ಏಪ್ರಿಲ್,11,2026 (www.justkannada.in):  ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ...

ബി.ഡി.എസ് വിദ്യാര്‍ത്ഥിയുടെ ആത്മഹത്യ; ആരോപണവിധേയരായ അധ്യാപകര്‍ക്കെതിരെ നടപടി

കണ്ണൂര്‍: അഞ്ചരക്കണ്ടി മെഡിക്കല്‍ കോളേജില്‍ ബി.ഡി.എസ് വിദ്യാര്‍ത്ഥി ആശുപത്രി കെട്ടിടത്തില്‍ നിന്ന്...

“முதல்வர் வாகனம் முன்னே… செய்தி துறை வாகனம் பின்னே!” – செய்தி துறைக்கு செக் வைக்கும் அ.தி.மு.க!

தமிழக முதல்வரின் பிரசாரத்திற்கு தமிழக அரசின் ஊழியர்களையும், செய்தி துறையையும் தி.மு.க...

Shashi Tharoor: పాక్-అమెరికా రిలేషన్ ఇదేనా..? మధ్యవర్తిత్వంపై థరూర్ సెటైర్లు..

Shashi Tharoor: అమెరికా-ఇరాన్ మధ్య పాకిస్తాన్ మధ్యవర్తిత్వం చేస్తోంది. పాకిస్తాన్ మధ్యవర్తిత్వంపై...