31
May, 2026

A News 365Times Venture

31
Sunday
May, 2026

A News 365Times Venture

ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

Date:

ಬೆಂಗಳೂರು,ಏಪ್ರಿಲ್,13,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು  ನವದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಕ್ಷದ ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನಗತ್ಯವಾಗಿ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಎಲ್ಲಾ ಕಾಂಗ್ರೆಸ್ ಶಾಸಕರು ಪಕ್ಷದ ಶಿಸ್ತನ್ನ ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ ಎಂದು ಚಾಟಿ ಬೀಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಕುರಿತು ಪ್ರತಿಕ್ರಿಯಿಸಿ ಡಿಕೆ ಶಿವಕುಮಾರ್, “ಪಕ್ಷದ ವತಿಯಿಂದ ತಮಿಳುನಾಡಿಗೆ ತೆರಳುವಂತೆ ಸೂಚನೆ ನೀಡಿದ್ದರು. ಹೀಗಾಗಿ ಅಲ್ಲಿಗೆ ಹೋಗಿ ಬಂದಿದ್ದೇನೆ. ಮತ್ತೆ ತೆರಳಬೇಕಾಗಿದೆ. ಆ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ವರದಿ ನೀಡಬೇಕಿತ್ತು. ಭೇಟಿ ಮಾಡಿ ವರದಿ ಮಾಡಿದ್ದೇನೆ ಎಂದರು.

Key words: Disciplinary action, unnecessary statements, DCM, D.K. Shivakumar, warns, MLAs

The post ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നീറ്റിനും സി.ബി.എസ്.ഇക്കും പിന്നാലെ ബിരുദ പ്രവേശന പരീക്ഷയും താളം തെറ്റി, നോക്കുകുത്തിയായി എന്‍.ടി.എ

ന്യൂദല്‍ഹി: നീറ്റ് യു.ജി പരീക്ഷാ ക്രമക്കേടുകള്‍ക്ക് പിന്നാലെ, രാജ്യത്തെ കേന്ദ്ര സര്‍വകലാശാലകളിലേക്കുള്ള...

Balka Suman: బాల్క సుమన్‌కు బిగ్ షాక్.. 14 రోజుల రిమాండ్ విధించిన నాంపల్లి మెజిస్ట్రేట్

Balka Suman: బీఆర్ఎస్ మాజీ ఎమ్మెల్యే బాల్క సుమన్‌కు 14 రోజుల...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ...