21
April, 2026

A News 365Times Venture

21
Tuesday
April, 2026

A News 365Times Venture

ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ

Date:

ಮೈಸೂರು ಏಪ್ರಿಲ್, 21,2026 (www.justkannada.in): ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಸರ್ಕಾರ ಇದಕ್ಕೆ ಸಾಕ್ಷಿ ಇಂದಿನ ಅಭಿವೃದ್ಧಿ ಕಾಮಗಾರಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ  419.78 ಕೋಟಿ ರೂಗಳ   ವಿವಿಧ ಇಲಾಖೆಗಳಲ್ಲಿನ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.

ಪಿರಿಯಾಪಟ್ಟಣದ ಶಕ್ತಿ ದೇವತೆಯಾದ ಶ್ರೀ ಮಸಣಿಕಮ್ಮ ದೇವಾಲಯದ ನಿರ್ಮಾಣ, ಪಿರಿಯಾಪಟ್ಟಣದ ತಾಲ್ಲೂಕು ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ನಿರ್ಮಿಸುತ್ತಿರುವ ಕುವೆಂಪು ಭವನ ನಿರ್ಮಾಣ, ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನಡೆಸಿದರು.

ಇಂದು ಪಿರಿಯಾಪಟ್ಟಣದಲ್ಲಿ 419.78 ಕೋಟಿಯ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ. ಇದು ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇವೆ  ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ. ನಮ್ಮದು ನುಡಿದಂತೆ ನಡೆವ ಸರ್ಕಾರ. 2014 ರಲ್ಲಿ 168 ಭರವಸೆಗಳನ್ನು ನೀಡಿದ್ದೆವು ಇದರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು. ಅಲ್ಲದೆ ಹೊಸ 20 ಯೋಜನೆಗಳನ್ನು ಜಾರಿಗೆ ತಂದೆವು. ಈ ಬಾರಿ ಭರವಸೆ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದು ಅಸಾಧ್ಯ. ಇವನ್ನು ಜಾರಿಗೆ ತಂದರೆ ರಾಜ್ಯದ ಖಜಾನೆ ಖಾಲಿಯಾಗುತ್ತದೆ ಎಂದು ಟೀಕಿಸಿದ್ದರು. ಆದರೆ ಇತರೆ ರಾಜ್ಯಗಳಲ್ಲಿ ನಮ್ಮ ಗ್ಯಾರೆಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ ಎಂದರು.

ನಾವು 4,48,004 ಕೋಟಿ ವೆಚ್ಚದ ಬಜೆಟನ್ನು ಮಂಡಿಸಲಾಗಿದೆ. ನಮ್ಮ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಜನರು ನಮ್ಮ ಪರ ಇದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿ ಈ ತಾಲ್ಲೂಕಿನ ಅಂತರ್ಜಲ ಅಭಿವೃದ್ಧಿ ಪಡಿಸಲು ಕೆರೆ ತುಂಬಿಸುವ ಯೋಜನೆಯನ್ನು ಜಾರಿಗೆ ತಂದಿದ್ದೆವು. ಇದರಿಂದ ಜಿಲ್ಲೆಯ ಅಂತರ್ಜಲ ಮಟ್ಟ ಹೆಚ್ಚಳ ಆಗಿದೆ. 50 -60 ವರ್ಷಗಳಿಂದ ಪೋಡಿ ಆಗದ, ಪೌತಿ ಖಾತೆ ಆಗದ ಜಾಮೀನನ್ನು ಪೌತಿ ಖಾತೆ ಮಾಡಿ ಕೊಡಲಾಗುತ್ತಿದೆ. ರಸ್ತೆಗಳಿಗೆ ಹೊಸ ರೂಪವನ್ನು ಕೊಟ್ಟು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಕೃಷಿ ಇಲಾಖೆಯಿಂದ 3 ಸಾವಿರ ಕೋಟಿ ವೆಚ್ಚದಲ್ಲಿ ರಾಜ್ಯದಾದ್ಯಂತ ರೈತರಿಗೆ ಕೃಷಿ ಉಪಕರಣಗಳನ್ನು ವಿತರಣೆ ಮಾಡಲಾಗುತ್ತಿದೆ. ಇಡೀ ರಾಜ್ಯದಲ್ಲಿ ಪಂಪ್ ಸೆಟ್ ಗೆ 7 ಗಂಟೆಗಳ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದರ ಅವಲಂಬನೆಯನ್ನು ಕಡಿಮೆ ಮಾಡಲು ಸೋಲಾರ್ ಪಂಪ್ ಅಳವಡಿಸಲು ಸಹಾಯಧನ ನೀಡಲಾಗುತ್ತಿದೆ. ತಾಲ್ಲೂಕಿನಲ್ಲಿ 63 ಮೆಗಾ ವ್ಯಾಟ್ ಉತ್ಪಾದನೆಯ ಸೋಲಾರ್ ಯೋಜನೆಯನ್ನು ಎರಡು ಕಡೆ ಜಾರಿಗೆ ತರಲಾಗಿದೆ. ಮೇಕೆದಾಟು ಯೋಜನೆಗೆ ಅಗತ್ಯ ಭೂಮಿ ನೀಡಿ, ಡಿಪಿಆರ್ ತಯಾರಿಸಲಾಗಿದೆ. ನಮ್ಮ ಗ್ಯಾರೆಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ತಿಳಿಸಿದರು.

ಪಶು ಸಂಗೋಪನಾ ಇಲಾಖೆಯ ಸಚಿವ ಕೆ ವೆಂಕಟೇಶ್ ಅವರು ಮಾತನಾಡಿ ಬಹಳ ವರ್ಷಗಳ ಕಾಲ ನೆನೆಗುದಿಗೆ ಬಿದ್ದಿದ್ದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆಡೆಯುತ್ತಿದೆ. ಪಿರಿಯಾಪಟ್ಟಣ ತಾಲ್ಲೂಕು ಕಡಿಮೆ ನೀರಾವರಿ ಹೊಂದಿರುವ ಜಿಲ್ಲೆ. ಹಲವು ನೀರಾವರಿ ಯೋಜನೆಗಳ ಮೂಲಕ ಕೆರೆಗಳ ತುಂಬಿಸುವ ಕಾರ್ಯ ಮಾಡಲಾಗುತ್ತಿದೆ. 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ. ಈ ತಿಂಗಳ ಜೂನ್ ಗೆ ನೀರು ತುಂಬಿಸುವ ಕಾರ್ಯ ಜಾರಿಗೆ ಬರಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದರು.

ಮಸಳಿಕಮ್ಮ ದೇವಸ್ಥಾನ ಜೀರ್ಣೋದ್ಧಾರ, ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ. ನಮ್ಮ ಸರ್ಕಾರ ಯಾವಾಗಲೂ ಅಭಿವೃದ್ಧಿ ಪರ, ಬಡವರ ಪರ ಹಾಗೂ ರೈತರ ಪರವಾದ ಸರ್ಕಾರವಾಗಿದೆ. 5 ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ 58 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ. ಇದರಿಂದ ಜನರ ಜೀವನ ಮಟ್ಟ ಸುಧಾರಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ,  ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, ಕೃಷಿ ಸಚಿವ ಚಲುವರಾಯಸ್ವಾಮಿ, ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣಭೈರೇಗೌಡ, ಶಾಸಕರಾದ ಡಿ ರವಿಶಂಕರ್, ಕೆ ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ್,  ವಿಧಾನ ಪರಿಷತ್ ಸದಸ್ಯರಾದ, ಡಾ. ಡಿ ತಿಮ್ಮಯ್ಯ, ಕೆ ಶಿವಕುಮಾರ್, ಪ್ರಾದೇಶಿಕ ಆಯುಕ್ತರಾದ ನಿತೀಶ್ ಪಾಟೀಲ್, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಚೆಸ್ಕಾಂ ಎಂ ಡಿ ಅರ್ಚನ ಅವರು ಸೇರಿದಂತೆ  ಸಾರ್ವಜನಿಕರು ಉಪಸ್ಥಿತರಿದ್ದರು.

Key words: Our government, development, works, CM Siddaramaiah

The post ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അപ്രതീക്ഷിത സ്ഫോടനം; ചികിത്സാ സഹായങ്ങൾ ലഭ്യമാക്കും; തൃശൂരിലെ സ്‌ഫോടനത്തിൽ പ്രതികരിച്ച് മുഖ്യമന്ത്രി

തൃശ്ശൂർ: തൃശൂരിലെ വെടിക്കെട്ട് പുരയിലുണ്ടായ സ്‌ഫോടനത്തിൽ പ്രതികരിച്ച് മുഖ്യമന്ത്രി പിണറായി വിജയൻ.പുറത്തുവരുന്ന...

தமிழ்நாட்டில் தொடங்கியது `அமைதி நேரம்’ – ஓய்ந்தது 2026 சட்டமன்றத் தேர்தல் பிரசாரம்!

தமிழ்நாட்டின் சட்டப்பேரவைத் தேர்தல் களம் இறுதிக்கட்டத்தை எட்டியுள்ளது. தமிழ்நாட்டின் தேர்தலில் இம்முறை...

Ganja: గంజాయి మాయలో సాఫ్ట్‌వేర్ ఇంజనీర్.. ఉద్యోగం వదిలి.. ఇంటిపైనే సాగు..

చెడు సావాసాలు ఎంతటి వ్యసనాలకు గురిచేస్తాయో, ఆ వ్యసనాలు ఉన్నతమైన భవిష్యత్తును...

തൃശ്ശൂരിൽ പടക്ക നിർമാണ ശാലയിൽ സ്ഫോടനം; മൂന്നുമരണം, 40 പേർക്ക് പൊള്ളലേറ്റെന്ന് പ്രാഥമിക നിഗമനം

തൃശൂർ: തൃശൂർ മുണ്ടത്തിക്കോട് വെടിക്കെട്ട് നിർമാണശാലയിൽ സ്ഫോടനം, തൃശൂർ പൂരത്തിനാവശ്യമായ വെടിക്കെട്ട്...