ಬೆಂಗಳೂರು,ಏಪ್ರಿಲ್,23,2026 (www.justkannada.in): ರಾಜ್ಯದ 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ.
ಶೇ 91.6 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ನೇರವಾಗಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಿದ್ದು karresults.nic.in ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಗೆ ಫಲಿತಾಂಶ ರವಾನೆಯಾಗಲಿದೆ.
ಡಿಜಿಲಾಕರ್ ನಲ್ಲಿ ಅಂಕಪಟ್ಟಿ ಲಭ್ಯವಾಗಲಿದೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಲಿದ್ದಾರೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿತ್ತು.
Key words: SSLC exam, results, announced
The post SSLC ಪರೀಕ್ಷಾ ಫಲಿತಾಂಶ ಪ್ರಕಟ: ಈ ಬಾರಿ ಶೇ 91.6 ರಷ್ಟು ವಿದ್ಯಾರ್ಥಿಗಳು ಪಾಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





