ಬೆಂಗಳೂರು,ಏಪ್ರಿಲ್,25,2026 (www.justkannada.in): ಕಳೆದ ಎರಡು ದಿನಗಳ ಹಿಂದಷ್ಟೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಫಲಿತಾಂಶದಲ್ಲಿ ಕಲಬುರಗಿ ಕೊನೇ ಸ್ಥಾನದಲ್ಲಿರುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದ ವೇಳೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಗರಂ ಆದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಜೆಡಿಎಸ್ ಬಿಜೆಪಿ ಭೌತಿಕ ದಿವಾಳಿ ಆಗಿದ್ದಾರೆ. ಶಿವಮೊಗ್ಗ ಜಿಲ್ಲೆ ಏನ್ ಸಿಂಗಾಪುರ್ ಆಗಿದೆಯಾ? ಹುಬ್ಬಳ್ಳಿಯನ್ನು ಹಾಂಕಾಂಗ್ ಮಾಡಿದ್ದಾರಾ ಬೊಮ್ಮಾಯಿ? ಕಲಬುರಗಿಯಲ್ಲಿ ಬಿಜೆಪಿಯವರ ಮಕ್ಕಳು ಇಲ್ಲವಾ? ಅವರಿಗೆಲ್ಲಾ ಬುದ್ದಿ ಇಲ್ವಾ? ಎಂದು ಕಿಡಿಕಾರಿದರು.
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕಲಬುರಗಿ ಕೊನೇ ಸ್ಥಾನ ಬಂದಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನ ಬಿಜೆಪಿ ಜೆಡಿಎಸ್ ನಾಯಕರು ಟೀಕಿಸಿದ್ದರು. ಇದೀಗ ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.
Key words: Kalbargi, last rank, SSLC results, Minister, Priyank Kharge
The post SSLC ಫಲಿತಾಂಶದಲ್ಲಿ ಕಲ್ಬುರ್ಗಿಗೆ ಕೊನೇ ಸ್ಥಾನ: ಪ್ರಶ್ನಿಸಿದ್ದಕ್ಕೆ ಗರಂ ಆದ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





