ನವದೆಹಲಿ,ಏಪ್ರಿಲ್, 28,2026 (www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮೇ ಅಂತ್ಯಕ್ಕೆ ಒಂದು ನಿರ್ಧಾರಕ್ಕೆ ಬರಬಹುದು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತಡ ಮಾಡಬಾರದು. ಸಿಎಂ ಗೊಂದಲ ತಕ್ಷಣ ಬಗೆಹರಿಸಬೇಕು ಎಂದು ವರಿಷ್ಠರಿಗೆ ಮನವಿ ಮಾಡಿದ್ದೇವೆ.
ಏನಾದರೂ ಒಂದು ನಿರ್ಧಾರ ಸ್ಪಷ್ಟವಾಗಿ ತೆಗೆದುಕೊಳ್ಳಬೇಕು. ಮೇ ಅಂತ್ಯದ ವೇಳೆಗೆ ಹೈಕಮಾಂಡ್ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಬಹುದು ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
Key words: CM change issue, High command, Minister, K.H. Muniyappa
The post ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





