ಬೆಂಗಳೂರು,ಏಪ್ರಿಲ್,30,2026 (www.justkannada.in): ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಮತ್ತು ಉಪಲೋಕಾಯುಕ್ತರು ದುರಂತ ಸಂಭವಿಸಿದ ಬೌರಿಂಗ್ ಆಸ್ಪತ್ರೆಯ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್, ಒಂದೇ ಮಳೆಗೆ ಇಷ್ಟೆಲ್ಲಾ ಅವಾಂತರಗಳಾಗುತ್ತಿದ್ದರೂ ಜಿಬಿಎ ಮತ್ತು ಜಲಮಂಡಳಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಮರದ ರೆಂಬೆಗಳನ್ನು ತೆರವುಗೊಳಿಸುವ ಪ್ರಾಥಮಿಕ ಕೆಲಸಗಳು ಏಕಾಗಿಲ್ಲ? ಗೋಡೆಗಳು ಶಿಥಿಲವಾಗಿದ್ದರೂ ವ್ಯಾಪಾರಕ್ಕೆ ಅನುಮತಿ ನೀಡಿದ್ದು ಯಾಕೆ? ವೈದ್ಯಕೀಯ ಶಿಕ್ಷಣ ಇಲಾಖೆಯು ಈ ತಡೆಗೋಡೆಯ ಬಗ್ಗೆ ಯಾವುದೇ ಗಮನಹರಿಸಿರಲಿಲ್ಲವೇ ಎಂದು ಪ್ರಶ್ನಿಸಿದರು.
ಪ್ರಕರಣವನ್ನ ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದ್ದು ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ ಎನ್ನಲಾಗಿದೆ.
Key words: Bowring Hospital, Lokayukta Justice, B.S. Patil, visits
The post ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





