ಮೈಸೂರು,ಮೇ,7,2026 (www.justkannada.in): ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಈ ಕುರಿತು ಮಾತನಾಡರುವ ಎಎಲ್ ಸಿ ಹೆಚ್. ವಿಶ್ವನಾಥ್, ಮುಂಬರುವ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಬಿಎಸ್ ವೈ ಅಭಿಮಾನೋತ್ಸವ ಕುರಿತು ಪ್ರತಿಕ್ರಿಯಿಸಿರುವ ಹೆಚ್. ವಿಶ್ವನಾಥ್, ಪೋಕ್ಸೋ ಪ್ರಕರಣದ ಆರೋಪಕ್ಕೆ ಬಿಎಸ್ ವೈ ಗುರಿಯಾಗಿದ್ದಾರೆ. ಇದು ಗಂಭೀರ ಪ್ರಕರಣವಾಗಿದೆ. ಇದೀಗ ಬಿಎಸ್ ವೈ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡೂ ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿಲ್ಲವೇ? ಎಂದು ಕಿಡಿಕಾರಿದ್ದಾರೆ.
Key words: H. Vishwanath, says, goodbye, electoral politics
The post ಚುನಾವಣಾ ರಾಜಕೀಯಕ್ಕೆ ಹೆಚ್ .ವಿಶ್ವನಾಥ್ ಗುಡ್ ಬೈ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





