ಗದಗ,ಮೇ,14,2026 (www.justkannada.in): ಗದಗ ಜಿಲ್ಲೆ ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಈಗ ಮತ್ತೊಂದು ಸಂಕಷ್ಟ ಶುರುವಾಗಿದ್ದು, ಸ್ವಾಮೀಜಿ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.
ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ವಚನಾನಂದ ಸ್ವಾಮೀಜಿ ವಿರುದ್ದ ಕೇಳಿ ಬಂದಿದೆ. ಈ ಸಂಬಂಧ ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನನ್ವಯ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಮೇ 7ರಂದು ಮೊದಲ ಬಾರಿಗೆ ಪ್ರಕರಣ ದಾಖಲಾಗಿತ್ತು. ಇದೀಗ ಎಫ್ ಐಆರ್ ದಾಖಲಾಗಿದೆ.
ಘಟನೆ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ, ಲಕ್ಷ್ಮೇಶ್ವರ ಪೊಲೀಸರು ಈ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿರುವ ಹರಿಹರ ಠಾಣಾ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ವಚನಾನಂದ ಸ್ವಾಮೀಜಿ ಅವರಿಗೆ ಈಗಾಗಲೇ ಅಧಿಕೃತ ನೋಟಿಸ್ ಜಾರಿ ಮಾಡಿದ್ದು ವಜನಾನಂದ ಸ್ವಾಮೀಜಿ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.
Key words: FIR, registered, against, Vachanananda Swamiji , POCSO case
The post ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ನಲ್ಲಿ FIR ದಾಖಲು..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





