25
May, 2026

A News 365Times Venture

25
Monday
May, 2026

A News 365Times Venture

ಇಂಧನ ಬೆಲೆ ಏರಿಕೆ: ಪ್ರಧಾನಿ ಮೋದಿಯಿಂಧ ಜನಸಾಮಾನ್ಯರ ಲೂಟಿ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಮೇ, 25,2026 (www.justkannada.in):  ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ ದರ ಏರಿಕೆ ಮಾಡಿ ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರಗಳ ಏರಿಸಿದ್ದು, ದೇಶದ ಇತಿಹಾಸದಲ್ಲಿ ಹೀಗೆ ಏರಿಕೆಯಾಗಿದ್ದಿಲ್ಲ. ಜನಸಾಮಾನ್ಯರು, ಮದ್ಯಮ ವರ್ಗದ ಜನರ ಜೀವನ ದುಸ್ತರವಾಗಿದೆ. ಬೆಲೆಯೇರಿಕೆಯಿಂದ ಜನ ತತ್ತರಿಸಿದ್ದಾರೆ ಎಂದರು.

 ’ಅಚ್ಛೇ ದಿನ್’ ಎಂದು ಜನರಿಗೆ ಟೋಪಿ ಹಾಕಲಾಗುತ್ತಿದೆ

ಬಿಜೆಪಿ ಅಧಿಕಾರಕ್ಕೆ ಬಂದರೆ ಗುಜರಾತ್ ಮಾದರಿ ಸರ್ಕಾರ ಬರುತ್ತದೆ,  ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಜನರಿಗೆ ಟೋಪಿ ಹಾಕಿದ್ದಾರೆ.  ಕಳೆದ 11 ದಿನಗಳಿಂದ 4 ಬಾರಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110 .93 ರೂ.ಗಳಾಗಿವೆ. ಡೀಸೆಲ್ ದರ 98.89 ರೂ.ಗಳಾಗಿವೆ.  7. 52 ರೂ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರಧಾನಿ ಮೋದಿಯವರು ದೇಶವನ್ನು ಲೂಟಿ ಮಾಡುತ್ತಿರುವುದು ರುಜುವಾತಾಗುತ್ತಿದೆ ಎಂದರು.

ಕಚ್ಚಾತೈಲ  ದರ ಕಡಿಮೆಯಿದ್ದಾಗಿನ ಲಾಭ ಗ್ರಾಹಕರಿಗೆ ದೊರೆಯಲಿಲ್ಲ

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 2014ರ ಮೇ ತಿಂಗಳಲ್ಲಿ 71.41 ರೂ. ಪೆಟ್ರೋಲ್ ಲೀ. ಒಂದಕ್ಕೆ ಬೆಲೆಯಿದ್ದರೆ, ಡೀಸೆಲ್ 56.71 ಪೈಸೆಯಿತ್ತು. ಅಂದು 412 ರೂ. ಆಗಿದ್ದ ಗ್ಯಾಸ್ ಸಿಲಿಂಡರ್ ಬೆಲೆ , ಇಂದು 915 ರೂ. ಆಗಿದೆ , ಇದು ದುಪ್ಪಟ್ಟಿಗಿಂತ ಹೆಚ್ಚಾಗಿದೆ.  ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಹೋಲಿಸಿದರೆ ಪ್ರಸ್ತುತ ಬೆಲೆ ಇಳಿದಿದ್ದರೂ ಕೂಡ, ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚುತ್ತಿದೆ. 65 ರಿಂದ 75 ಡಾಲರ್  ಬೆಲೆ ಇದ್ದಾಗ, ಈ ಕಡಿಮೆ ಬೆಲೆಯ ಲಾಭ, ಗ್ರಾಹಕರಿಗೆ ದೊರೆಯಲಿಲ್ಲ. ಪ್ರಸ್ತುತ ಕಚ್ಚಾ ತೈಲದ ಬೆಲೆ 100 ಡಾಲರ್ ಮಿತಿಯೊಳಗಿದ್ದರೂ, ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಸತತ ನಾಲ್ಕು ಬಾರಿ ಏರಿಕೆ ಮಾಡಿದೆ. ಇದರಿಂದಾಗಿ  ಗ್ರಾಹಕರಿಗೆ, ರೈತರಿಗೆ, ಜನಸಾಮಾನ್ಯರಿಗೆ ಈ ಬೆಲೆಏರಿಕೆಯ ಬಿಸಿ ತಟ್ಟಲಿದೆ. ಮೋದಿಯವರು ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ ಎಂದರು.

ಎಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ದಿನೇಶ್ ಗುಂಡೂರಾವ್, ಅಭಿಷೇಕ್ ದತ್ತಾ ಮೊದಲಾದವರು ಉಪಸ್ಥಿತರಿದ್ದರು.

Key words: Fuel, price, hike, PM Modi, looting, CM Siddaramaiah

The post ಇಂಧನ ಬೆಲೆ ಏರಿಕೆ: ಪ್ರಧಾನಿ ಮೋದಿಯಿಂಧ ಜನಸಾಮಾನ್ಯರ ಲೂಟಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മധു കൊലപാതകം: 12 പ്രതികളുടെ ശിക്ഷ ജീവപര്യന്തമാക്കി വര്‍ധിപ്പിച്ചു

കൊച്ചി: അട്ടപ്പാടിയില്‍, ആള്‍ക്കൂട്ട ആക്രമണത്തില്‍ ആദിവാസി യുവാവ് മധു കൊല്ലപ്പെട്ട കേസില്‍...

மேகதாது: `தமிழர்களுக்கு எந்த வகையிலும் துரோகம் இழைக்கக் கூடாது என்பதில்…' – அமைச்சர் பி.விஸ்வநாதன்

தமிழ்நாட்டின் புதிய உயர்கல்வித்துறை அமைச்சராகப் பொறுப்பேற்றுள்ள காங்கிரஸ் கட்சியின் பி.விஸ்வநாதன், மதுரை...

NEET UG 2026 Fee Refund: నీట్ యూజీ పరీక్ష ఫీజు రిఫండ్ ప్రక్రియ ప్రారంభం.. చివరి తేదీ మే 27..

వైద్య విద్యా కోర్సుల్లో ప్రవేశాల కోసం దేశవ్యాప్తంగా నిర్వహించే ‘నీట్ యూజీ...

യു.എസ് ഉപരോധത്തെ അതിജീവിക്കാന്‍ ചൈനീസ് സഹായം; ക്യൂബയിലേക്ക് ആദ്യഘട്ട അരി വിഹിതമെത്തി, നന്ദിയറിയിച്ച് പ്രസിഡന്റ്

  ഹവാന: അമേരിക്കന്‍ ഉപരോധത്തെത്തുടര്‍ന്ന് രാജ്യം കടുത്ത സാമ്പത്തിക പ്രതിസന്ധി നേരിടുന്ന...