ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 66 ಮಂದಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. . ಕನ್ನಡಿಗ ಶತಾವಧಾನಿ ಆರ್. ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ, ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ದೇಶದ ಪ್ರಮುಖ ರಾಜಕೀಯ ಗಣ್ಯರು ಉಪಸ್ಥಿತರಿದ್ದರು.
Key words: President, Draupadi Murmu, 2026 Padma Awards
The post 2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





