28
June, 2026

A News 365Times Venture

28
Sunday
June, 2026

A News 365Times Venture

ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು, ಜೂನ್, 27,2026 (www.justkannada.in):  ಇನ್ಮುಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ವರ್ಷಕ್ಕೊಂದು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಜೃಂಭಣೆಯಿಂದ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು,  ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಅಥವಾ ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸದೆ, ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಗುವುದು. ಈ ವರ್ಷ ಯಶವಂತಪುರ ಕ್ಷೇತ್ರದ ಕೆಂಪೇಗೌಡ ಲೇಔಟ್‌ ನಲ್ಲಿ ಜಯಂತಿ ಆಚರಣೆ ಪ್ರಾರಂಭವಾಗಿದ್ದು, ಮುಂದಿನ 28 ವರ್ಷಗಳ ಕಾಲ ಬೇರೆ ಬೇರೆ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಮುಂದುವರೆಯಲಿದೆ. ಜಿಬಿಎ ವತಿಯಿಂದ ಇದಕ್ಕೆ ಹಣಕಾಸಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ಟ್ರಂಪೆಟ್ ಸರ್ಕಲ್ ಬಳಿ ಕೆಂಪೇಗೌಡರ ಗುರುತನ್ನು ಪ್ರತಿಬಿಂಬಿಸುವ ಮತ್ತೊಂದು ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ. ಕೆಂಪೇಗೌಡರ ಆಚಾರ-ವಿಚಾರಗಳನ್ನು ಅಳವಡಿಸಿಕೊಂಡು ಬೆಂಗಳೂರಿಗೆ ಹೊಸ ರೂಪ ನೀಡುವ ಚಿಂತನೆ ಇದೆ ಎಂದು  ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words: Kempegowda Jayanti, Bengaluru, every year, CM, DK Shivakumar

The post ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

SUV Safety: ఎస్‌యూవీలతో పాదచారులకు ముప్పు.. 8 ఏళ్లలో 3,000కు పైగా మరణాలు!

SUV Safety: రోడ్డుపై పెద్దగా, బలంగా కనిపించే ఎస్‌యూవీ (SUV) కార్లు...

ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು- ಕೇಂದ್ರ ಸಚಿವ HDK ಟಾಂಗ್

ಬೆಂಗಳೂರು,ಜೂನ್,27,2026 (www.justkannada.in):  ನಾಡಪ್ರಭು ಕೆಂಪೇಗೌಡರ ಜಯಂತಿ ವೇಳೆ ಕೇವಲ ಸಸಿ...

വധശിക്ഷയാവുന്ന വിചാരണത്തടവ്; ‘ജാമ്യവും ചികിത്സയും ലഭിച്ചിരുന്നെങ്കിൽ അബ്ദുല്‍ ഖാദർ മരിക്കുമായിരുന്നില്ല’

ബെംഗളൂരു സ്ഫോടന കേസില്‍ 17 വര്‍ഷത്തോളമായി വിചാരണത്തടവുകാരനായി കഴിയുകയായിരുന്ന കുടക് സ്വദേശി...

”அடுத்த சட்டமன்றத் தொடரில் Dance Performance இருக்கும்” – முதல்வர் விஜய்யைச் சாடிய உதயநிதி

தஞ்சாவூர் மாவட்டம் ஒரத்தநாடு பகுதிகளில் இரண்டு திமுக நிர்வாகிகளின் இல்லத் திருமணம்...