ಮೈಸೂರು,ಜುಲೈ,1,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಚಿವರಾದ ಮೇಲೆ ಮೊದಲ ಬಾರಿಗೆ ನಗರಾಭಿವೃದ್ದಿ ಇಲಾಖೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.
ಜುಲೈ 17 ರಿಂದ ಆಷಾಡ ಶುಕ್ರವಾರ ಹಿನ್ನಲೆಯಲ್ಲಿ ಇಂದು ಬೆಟ್ಟದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆಯೋಜನೆ ಮಾಡಲಾಗಿದೆ. ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಬೆಟ್ಟದ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಡಿಸಿಪಿಗಳಾದ ಪ್ರಿಯಂವದ, ಸುಂದರಾಜ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಆಷಾಢ ಶುಕ್ರವಾರದಲ್ಲಿ ಭಕ್ತರಿಗೆ ಪಾರ್ಕಿಂಗ್ ವ್ಯವಸ್ಥೆ, ದೇವರ ದರ್ಶನದ ವ್ಯವಸ್ಥೆ, ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕುರಿತಂತೆ ಸಿದ್ಧತೆಗಳ ಬಗ್ಗೆ ಸಚಿವ ಯತೀಂದ್ರ ಸಭೆ ನಡೆಸುತ್ತಿದ್ದಾರೆ.
Key words: Minister, Yathindra Siddaramaiah, visited, Chamundi Hills
The post ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





