ಬೆಂಗಳೂರು,ಜುಲೈ,8,2026 (www.justkannada.in): ಈ ಬಾರಿ ಮುಂಗಾರು ಮಳೆ ಸರಿಯಾಗಿ ಆಗದೇ ಇರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದ ಕಂಡಿದೆ. ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಪರಿಸ್ಥಿತಿ ಉಂಟಾಗಿದೆ. ಆದರೂ ಸಹ ತಮಿಳುನಾಡಿಗೆ ರಾಜ್ಯ ಸರ್ಕಾರ ಕದ್ದುಮುಚ್ಚಿ ನೀರು ಹರಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ರಾಜ್ಯ ಜೆಡಿಎಸ್ ಘಟಕ ಈ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ. ನಮ್ಮ ಕರ್ನಾಟಕದ ರೈತರ ಹೊಟ್ಟೆ ಮೇಲೆ ಹೊಡೆದು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ಖಂಡನೀಯ ಎಂದಿದೆ.
ಅಣೆಕಟ್ಟೆಯಲ್ಲಿ ನೀರಿಲ್ಲ ಎಂದು ನಮ್ಮ ರೈತರಿಗೆ ಬೆಳೆ ಬೆಳೆಯದಂತೆ ಹೇಳುವ ರೈತವಿರೋಧಿ ಸಿಎಂ ಡಿಕೆ ಶಿವಕುಮಾರ್ ಅವರೇ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಬಿಡುತ್ತಿರುವುದು ಯಾರ ಓಲೈಕೆಗಾಗಿ? ಎಂದು ಜೆಡಿಎಸ್ ಕಿಡಿಕಾರಿದೆ.
Key words: Cauvery water, secretly, released, Tamil Nadu, JDS
The post ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ- JDS ಆರೋಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





