12
July, 2026

A News 365Times Venture

12
Sunday
July, 2026

A News 365Times Venture

ನಾಳೆ ರಾಷ್ಟೀಯ ಲೋಕ ‍ಅದಾಲತ್‍

Date:

ಮಂಡ್ಯ,ಜುಲೈ,10,2026 (www.justkannada.in): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ  ರಾಜ್ಯಾದ್ಯಂತ ಜುಲೈ 11  ರಂದು (ನಾಳೆ) ರಾಷ್ಟ್ರೀಯ ಲೋಕ್-ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ.

ಮಂಡ್ಯ ಜಿಲ್ಲೆಯ 7 ತಾಲ್ಲೂಕುಗಳಲ್ಲಿಯೂ ಸಹ ಲೋಕ್‍ ಅದಾಲತ್‍ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠೆಕ್‍ ಗಳನ್ನು ನಡೆಸುತ್ತಿದ್ದು, ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ವಿಭಾಗದ ದಾವೆಗಳು, ಹಣವಸೂಲಾತಿ ದಾವೆಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಿಸಿರುವ ದಾವೆಗಳು, (MVC) ಮೋಟಾರು ವಾಹನಗಳ ಪ್ರಕರಣಗಳು, MMRD ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ರಾಜಿ ಆಗಬಹುದಾದಂತಹ ಕ್ರಿಮಿನಲ್‍ ಪ್ರಕರಣಗಳನ್ನು ಮತ್ತು ಚೆಕ್‍ ಬೌನ್ಸ್ ಪ್ರಕರಣಗಳು, LAC ಪ್ರಕರಣಗಳು, Exectution ಪ್ರಕರಣಗಳನ್ನು  ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಲೋಕ್‍ ಅದಾಲತ್‍ ನ್ಯಾಯಾಲಯಗಳನ್ನು ರಚಿಸಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ.

ಲೋಕ ಅದಾಲತ್ ಪೀಠದಲ್ಲಿ ನ್ಯಾಯಾಧೀಶರು ಮತ್ತು ನುರಿತ ವಕೀಲರು ಕುಳಿತು ವಾದಿ-ಪ್ರತಿವಾದಿಗಳನ್ನು ಕೂರಿಸಿಕೊಂಡು ಅವರ ಮನವೊಲಿಸಿ ವ್ಯಾಜ್ಯಕ್ಕೆ ಅವರ ಸಮಕ್ಷಮದಲ್ಲೇ ಪರಿಹಾರ ಕಂಡುಕೊಳ್ಳಬಹುದಾಗಿದೆ ಹಾಗೂ ಲೋಕ ಅದಾಲತ್ ಮೂಲಕ ವ್ಯಾಜ್ಯ ಇತ್ಯರ್ಥಪಡಿಸಿಕೊಂಡರೆ ನ್ಯಾಯಲಯದ ಶುಲ್ಕ ವಿಧಿಸುವುದಿಲ್ಲ ಈಗಾಗಲೇ ಕಟ್ಟಿರುವಂತಹ ನ್ಯಾಯಾಲಯದ ಶುಲ್ಕವನ್ನು ಸಹ ಮರಳಿ ನೀಡಲಾಗುತ್ತದೆ. ಹಾಗೂ ಲೋಕ ಅದಾಲತ್‍ ನಲ್ಲಿ ಪ್ರಕರಣಗಳು ಇತ್ಯರ್ಥಗೊಂಡರೆ ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ.  ಸದರಿ ತೀರ್ಮಾನವು ನ್ಯಾಯಾಲಯ ನೀಡಿದ ತೀರ್ಮಾನದಷ್ಟೇ ಮೌಲ್ಯ ಹೊಂದಿರುತ್ತದೆ.

ಲೋಕ ಅದಾಲತ್‍ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವಂತಹ ಪ್ರಕರಣಗಳ ಜೊತೆಗೆ, ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ, ವ್ಯಾಜ್ಯ ಪೂರ್ವ ಪ್ರಕರಣಗಳು (ಬ್ಯಾಂಕ್ ಸಾಲ  ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್‍ ಪ್ರಕರಣಗಳು)  ಇಂತಹ ಪ್ರಕರಣಗಳಿಗೆ  ಸಂಬಂಧಿಸಿದಂತೆ  ಉಭಯ ಪಕ್ಷಗಾರರಿಗೆ ನೋಟೀಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್‍ ನಲ್ಲಿ ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಹಾಗೂ ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿಮಾಡಿಕೊಳ್ಳಬಹುದಾಗಿರುತ್ತದೆ. ಇದರಿಂದ ಪ್ರಕರಣವು ಶೀಘ್ರವಾಗಿ ಇತ್ಯರ್ಥವಾಗುತ್ತದೆ ಹಾಗೂ ಹಣ ಹಾಗೂ ಅಮೂಲ್ಯವಾದ ಸಮಯ ಉಳಿತಾಯವಾಗುತ್ತದೆ.

ಈ ಬಾರಿಯ ಲೋಕ್‍-ಅದಾಲತ್‍ ನಲ್ಲಿ ಕಕ್ಷಿದಾರರ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕಕ್ಷಿದಾರರಿಗೆ  ಅನುಕೂಲವಾಗುವ ರೀತಿಯಲ್ಲಿ ನ್ಯಾಯಧಾನ ಮಾಡಬೇಕೆಂಬ ಇಚ್ಫೆಯಿಂದ ಈ ಮೇಲಿನ ಎಲ್ಲಾ ಪ್ರಕರಣಗಳನ್ನು ತೆಗೆದುಕೊಂಡಿದ್ದು, ಜನ ಸಾಮಾನ್ಯರು ಹಾಗೂ ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಂಡು ಲೋಕ್‍ ಅದಾಲತ್‍ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಲೋಕ್-ಅದಾಲತ್‍ ಅನ್ನು ಯಶಸ್ವಿಗೊಳಿಸಿಕೊಳ್ಳಬಹುದಾಗಿದೆ.

Key words: National, Lok Adalat, tomorrow

The post ನಾಳೆ ರಾಷ್ಟೀಯ ಲೋಕ ‍ಅದಾಲತ್‍ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മേഖലയിലെ യു.എസ് ഇടപെടല്‍ അവസാനിക്കും വരെ ഒരു കപ്പലും ഹോര്‍മുസ് കടക്കില്ല: ഇറാന്‍

ടെഹ്‌റാന്‍: ഹോര്‍മുസ് കടലിടുക്കിലൂടെയുള്ള കപ്പല്‍ ഗതാഗതം അനിശ്ചിത കാലത്തേക്ക് തടയുകയാണെന്ന് ഇറാന്റെ...

'ஸ்டார்ட்… கேமரா… ஆக்ஷன்' – முதல்வர் விஜய் பேச்சு குறித்து ஜெயக்குமார் விமர்சனம்

சட்டமன்ற தேர்தல் படுதோல்விக்குப் பிறகு எடப்பாடி பழனிசாமி தன் தலைமையில் மாவட்ட...

Donald Trump: నన్ను చంపడానికి ట్రై చేస్తే 1,000 క్షిపణులు సిద్ధంగా ఉన్నాయ్.. ట్రంప్ షాకింగ్ ప్రకటన..

Donald Trump: అమెరికా అధ్యక్షుడు డొనాల్డ్ ట్రంప్ మరోసారి స్ట్రాంగ్ వార్నింగ్...

KPSC ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜುಲೈ,11,2026 (www.justkannada.in): ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ದ...