ಬೆಳಗಾವಿ,ಜುಲೈ,13,2026 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆಗೆ ಹೋಗುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಪಕ್ಷ ಸಂಘಟನೆಗೆ ಬರುತ್ತಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮೊದಲಿನಿಂದಲೂ ನಾವು ಅದನ್ನೇ ಹೇಳುತ್ತಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆಗೆ ಹೋಗುತ್ತೇವೆ. ಅಹಿಂದ ನಾಯಕತ್ವ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಕಾಲ ಕಾಲಕ್ಕೆ ಅದು ಗೊತ್ತಾಗುತ್ತದೆ ಎಂದರು.
ಆದಷ್ಟು ಬೇಗ ಸಂಫುಟ ವಿಸ್ತರಣೆ ಆಗಬೇಕಿದೆ. ಹರಿಪ್ರಸಾದ್ ಗೆ ಸಚಿವ ಸ್ಥಾನ ಎಂಬ ವಿಚಾರ ಸಂಬಂಧ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ನನಗ ಗೊತ್ತಿಲ್ಲ. ಬೆಳಗಾವಿ ದೊಡ್ಡ ಜಿಲ್ಲೆ. ಮೂವರಿಗೆ ಸಚಿವ ಸ್ಥಾನ ಕೊಡಬೇಕು. ಜಿಲ್ಲೆಯ ಮೂವರಿಗೆ ಸಚಿವ ಸ್ಥಾನ ಕೊಟ್ಟರೆ ಒಳ್ಳೆಯದಾಗುತ್ತೆ ನಾವು ಯಾರನ್ನೂ ಸಂಪರ್ಕ ಮಾಡಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
Key words: 2028 elections, Siddaramaiah, leadership, Minister, Satish Jarkiholi
The post ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆಗೆ ಹೋಗ್ತೇವೆ- ಸಚಿವ ಸತೀಶ್ ಜಾರಕಿಹೊಳಿ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





