17
July, 2026

A News 365Times Venture

17
Friday
July, 2026

A News 365Times Venture

ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ- ಸಿಎಂ ಡಿ.ಕೆ ಶಿವಕುಮಾರ್

Date:

ಬೆಂಗಳೂರು, ಜುಲೈ,13,2026 (www.justkannada.in): “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ ರಾಜ್ಯದ ವಾದ ಮಂಡಿಸುತ್ತೇವೆ. ನಂತರ ತೀರ್ಮಾನವನ್ನು ತಿಳಿಸುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವಕುಮಾರ್ ಅವರು, ಮಂಡ್ಯ ಶಾಸಕರು ಕಾವೇರಿ ನೀರು ಬಿಡುವಂತೆ ಮನವಿ ಮಾಡಿರುವ ಬಗ್ಗೆ ಕೇಳಿದಾಗ, “ಮಂಡ್ಯದವರು, ಶ್ರೀರಂಗಪಟ್ಟಣದವರು, ಜಿಲ್ಲಾ ಸಚಿವರು ಬಂದು ಭೇಟಿ ಮಾಡಿದ್ದರು. ಸಭೆ ಬಳಿಕ ತೀರ್ಮಾನ ತಿಳಿಸುತ್ತೇವೆ” ಎಂದು ಹೇಳಿದರು.

ಕೆಪಿಎಸ್ ಸಿ ಅಧ್ಯಕ್ಷರ ಅಮಾನತ್ತಿನ ಬಗ್ಗೆ ಕೇಳಿದಾಗ, “ರಾಜ್ಯಪಾಲರು ಈ ಆದೇಶ ಮಾಡಿದ್ದಾರೆ. ಅವರ ನಂತರ ಯಾರು ಹಿರಿಯರು ಇದ್ದಾರೋ ಅವರಿಗೆ ಜವಾಬ್ದಾರಿ ನೀಡುವಂತೆ ನಿರ್ದೇಶನ ನೀಡಿದ್ದೇನೆ” ಎಂದರು.

ತಿರುಪತಿಯಲ್ಲಿ ಆಗುವ ಮೊದಲ ಆರತಿ ರಾಜ್ಯದ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ

ತಿರುಪತಿಯಲ್ಲಿ ಮೊದಲ ಆರತಿ ಕರ್ನಾಟಕ ರಾಜ್ಯದವರಿಗೆ ಎಂಬ ತೀರ್ಮಾನದ ಬಗ್ಗೆ ಕೇಳಿದಾಗ, “ತಿರುಪತಿಯಲ್ಲಿ ಮಹಾರಾಜರ ಕಾಲದಿಂದಲೂ ಮೊದಲ ಆರತಿ ಕರ್ನಾಟಕದ್ದಾಗಿದೆ. ಅಲ್ಲಿ ಪ್ರತಿದಿ‌ನ ಅಧಿಕಾರಿಯೊಬ್ಬರು ಆರತಿ ಪಡೆಯುತ್ತಾರೆ. ಆ ಅಧಿಕಾರಿ ಬದಲಿಗೆ ಇಲ್ಲಿಂದ ದರ್ಶನಕ್ಕೆ ಹೋಗುವ ಜನಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳಿಗೆ, ಸಂಸದರು, ಮೇಯರ್, ತಹಶೀಲ್ದಾರ್ ಸೇರಿದಂತೆ ನಮ್ಮ ರಾಜ್ಯದವರಿಗೆ ಅವಕಾಶ ನೀಡಲಾಗುವುದು. ಇದು ನಿರ್ದಿಷ್ಟ ಪಕ್ಷಕ್ಕೆ ಎಂದು ಸೀಮಿತವಲ್ಲ. ಯಾವುದೇ ಪಕ್ಷದ ಜನಪ್ರತಿನಿಧಿಗಳು ಹೋದರೂ ಈ ಅವಕಾಶ ಅವರಿಗೆ ಸಿಗಬೇಕು. ಇದಕ್ಕೆ ನಿರ್ದಿಷ್ಟ ಮಾರ್ಗಸೂಚಿಗಳಿದ್ದು, ಅದರಂತೆಯೇ ಈ ಅವಕಾಶ ನೀಡಲಾಗುವುದು. ನಮ್ಮ ತೀರ್ಮಾನ ಕೇವಲ ಆರತಿ ವಿಚಾರಕ್ಕೆ ಮಾತ್ರ. ಉಳಿದಂತೆ ಎಲ್ಲಾ ಮಾರ್ಗಸೂಚಿಗಳು ತಿರುಪತಿ ಆಡಳಿತ ಮಂಡಳಿಯಂತೆ ಇರಲಿದೆ. ಅವರ ಮಾರ್ಗಸೂಚಿಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.

ಆಗಸ್ಟ್ 6ರಿಂದ ಮುಂಗಾರು ಅಧಿವೇಶನ

“ಸಚಿವ ಸಂಪುಟ ಸಭೆ ಯಾವಾಗ, ದೆಹಲಿಗೆ ಹೋಗುವುದು ಯಾವಾಗ ಎಂಬ ಪ್ರಶ್ನೆಗೆ, “ಆಗಸ್ಟ್ 6ರಿಂದ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ” ಎಂದು ಮಾಹಿತಿ ನೀಡಿದರು.

“ಮಾಜಿ ಸಂಸದ ಹೆಚ್ ಹನುಮಂತಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದಿ. ಮೂರು ಬಾರಿ ರಾಜ್ಯಸಭೆ ಸದಸ್ಯರಾಗಿದ್ದರು. ರೈಲ್ವೇ ಆಯೋಗಕ್ಕೆ ಅಧ್ಯಕ್ಷರಾಗಿದ್ದರು. 45 ವರ್ಷಗಳಿಂದ ನನಗೆ ಆತ್ಮೀಯರಾಗಿದ್ದರು. ನಮ್ಮ ಪಕ್ಷದ ಉಪಾಧ್ಯಕ್ಷರಾಗಿ, ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ನಾನು, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್, ಡಿಸಿಎಂ ಪರಮೇಶ್ವರ್, ಸಚಿವರಾದ ಮುನಿಯಪ್ಪ ಅವರು ಅವರಿಗೆ ಅಂತಿಮ ನಮನ ಸಲ್ಲಿಸಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ರಾಜ್ಯ ಹಾಗೂ ರಾಷ್ಟ್ರದ ಸಮಸ್ಯೆಗಳಿಗೆ ಮಾರ್ಗದರ್ಶನ ಕೊಟ್ಟ ಹಿರಿಯ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ” ಎಂದು ತಿಳಿಸಿದರು.

Key words: Decision, releasing, Cauvery water, meeting, CM, D.K. Shivakumar

The post ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ- ಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿಜೆಪಿ ಹೈಕಮಾಂಡ್ ಗೆ ವಿಜಯೇಂದ್ರ ಕಂಡರೆ ಭಯ ಇದ್ದಂತೆ ಇದೆ- ಶಾಸಕ ಯತ್ನಾಳ್

ಮೈಸೂರು,ಜುಲೈ,17,2026 (www.justkannada.in): ಬಿಜೆಪಿ ಹೈಕಮಾಂಡ್ ಗೆ ವಿಜಯೇಂದ್ರ ಕಂಡರೆ ಭಯ...

തെറ്റുകള്‍ ഇനിയും ചൂണ്ടിക്കാട്ടും, അത് തെറ്റെങ്കില്‍ വീണ്ടും ആവര്‍ത്തിക്കും; തുറന്നടിച്ച് അലോഷ്യസ് സേവ്യര്‍

  കൊച്ചി: തെറ്റ് കണ്ടാല്‍ ചൂണ്ടിക്കാണിക്കുമെന്നും, ആ നടപടി തെറ്റാണെന്ന് സര്‍ക്കാരിന്...

Udhayanidhi: திமுக இளைஞரணிச் செயலாளர் பொறுப்பிலிருந்து விலகுகிறாரா உதயநிதி ஸ்டாலின்?

கட்சி மறுசீரமைப்புப் பணிகளில் தி.மு.க கவனம் செலுத்திவரும் நிலையில், இளைஞரணிச் செயலாளர்...

Off The Record: అవనిగడ్డ కూటమి పరిణామాలతోబుద్ధప్రసాద్ మధనపడుతున్నారా?

Off The Record: కృష్ణా జిల్లా అవనిగడ్డ నుంచి గెలిచిన జనసేన...