18
August, 2026

A News 365Times Venture

18
Tuesday
August, 2026

A News 365Times Venture

ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,25,2026 (www.justkannada.in): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.

ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ ಒಳಗಾಗದೆ ಶಾಂತಿಯುತ ಹೋರಾಟವನ್ನು ನಡೆಸಿದ ಲಕ್ಷಾಂತರ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಸರ್ವ ಸಮಸ್ಯೆಗಳು ಪರಿಹಾರವಾಗಲಾರದು. ಸರ್ವಾಧಿಕಾರ ಮತ್ತು ದುರಾಡಳಿತದ ಶಾಲೆಯ ಗುರುಗಳು ಕುರ್ಚಿಯಲ್ಲಿ ಭದ್ರವಾಗಿ ಕುಳಿತಿರುವಾಗ ಇಂತಹ ಶಿಷ್ಯರ ನಿರ್ಗಮನದಿಂದ ಶಾಲೆಯ ಸುಧಾರಣೆಯಾಗಲಾರದು. ರಾಜಕೀಯದಿಂದ ಶಿಕ್ಷಣದ ವರೆಗೆ ಎಲ್ಲವನ್ನೂ ವ್ಯಾಪಾರೀಕರಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಗಮಿಸುವವರೆಗೆ ಶಿಕ್ಷಣ ವ್ಯವಸ್ಥೆಯೂ ಸುಧಾರಣೆಯಾಗದು, ಭಾರತವೂ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲಾರದು.

ಈ ಹಿನ್ನೆಲೆಯಲ್ಲಿ ಒಬ್ಬ ಅಸಮರ್ಥ ಮತ್ತು ಭ್ರಷ್ಟ ಸಚಿವನ ರಾಜೀನಾಮೆಗಾಗಿ ಸಂಭ್ರಮಾಚರಣೆ ಮಾಡದೆ, ದೇಶದ ವಿದ್ಯಾರ್ಥಿ-ಯುವಜನರು ಕೇಂದ್ರದಲ್ಲಿರುವ ಅಸಮರ್ಥ ಮತ್ತು ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವವರೆಗೆ ವಿರಮಿಸಬಾರದು. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ಜನರ ಜೊತೆಗೆ ಇರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: Union Minister, Dharmendra Pradhan, resignation, Former CM, Siddaramaiah

The post ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സി.ജെ.പി പ്രതിഷേധിക്കാരുടെ മുഖം തിരിച്ചറിയാന്‍ ഫേഷ്യല്‍ റെഗഗനിഷന്‍ സാങ്കേതിക വിദ്യ ഉപയോഗിച്ചെന്ന് സമ്മതിച്ച് ദല്‍ഹി പൊലീസ്

ന്യൂദല്‍ഹി: ജന്തര്‍ മന്ദറില്‍ നടന്ന വിദ്യാര്‍ത്ഥി പ്രതിഷേധത്തിനിടെ മുഖം തിരിച്ചറിയല്‍ സാങ്കേതികവിദ്യ...

காவலர் தாக்கப்பட்ட விவகாரம்:“Public Nuisance-ஐ தட்டிக் கேட்பதில் தவறில்லையே" – நயினார் நாகேந்திரன்

தஞ்சாவூரில் நேற்று விசிக-வினர் சாலமறியல் போராட்டத்தில் ஈடுபட்டனர். அதனால் அந்த வழியில்...

നീറ്റ് പ്രതിഷേധത്തിനിടെ AK-47 ഉപയോഗിച്ച് വെടിവെച്ച സംഭവം; സുപ്രീം കോടതിയിൽ ബീഹാർ പൊലീസിന്റെ സത്യവാങ്മൂലം

സിവാൻ: നീറ്റ്-യുജി പരീക്ഷാ ക്രമക്കേടുകൾക്കെതിരെ ബീഹാറിൽ നടന്ന പ്രതിഷേധത്തിനിടെ സിവാനിൽ പൊലീസുകാരൻ...