ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಅವರಿಗೆ ಸೇರಿದ ಡಾಲರ್ಸ್ ಕಾಲೋನಿ ನಿವಾಸ, ಕಚೇರಿ ಸೇರಿದಂತೆ 18 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜೂನ್ 24ರಂದು ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ವೈ. ಮಂಜುನಾಥ್ ಅವರ ಮೇಲೆ ಇಡಿ ದಾಳಿಯನ್ನು ನಡೆಸಿತ್ತು. ಇದೀಗ ಅದರ ಮುಂದುವರಿದ ತನಿಖೆಯ ಭಾಗವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ (ಭಾವ) ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಳಿ ನಡೆಸಿದ್ದರು. ಬೇನಾಮಿ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯದ ಒಟ್ಟು 6 ಪ್ರಮುಖ ಸ್ಥಳಗಳಲ್ಲಿ ಭಾರಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದೀಗ ಆ ತನಿಖೆಯ ಮುಂದುವರಿದ ಭಾಗವಾಗಿ ಈ ದಾಳಿಯನ್ನು ನಡೆಸಲಾಗಿದೆ.
Key words: ED, Raids, Minister, Satish Jarkiholi,
The post ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್ಲಿ ದಾಳಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





