17
September, 2026

A News 365Times Venture

17
Thursday
September, 2026

A News 365Times Venture

ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

Date:

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in):  “ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ  ಸಿಎಂ ಡಿಕೆ ಶಿವಕುಮಾರ್ ಅವರು ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಸರ್ಕಾರ ವತಿಯಿಂದ ಇಂಜಿನಿಯರ್ ದಿನ ಆಚರಿಸುವ ಪ್ರಸ್ತಾವನೆ ನೀಡಿದ್ದು, ನಾನು ಅದಕ್ಕೆ ಸಮ್ಮತಿ ಸೂಚಿಸಿದ್ದೇನೆ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ 1 ಲಕ್ಷಕ್ಕೂ ಹೆಚ್ಚು ತಯಾರು ಮಾಡುತ್ತಿದೆ. ಭಾರತದಲ್ಲಿ ಅತಿ ಹೆಚ್ಚು ಇಂಜಿನಿಯರ್ ಇದ್ದು, ಅವರನ್ನು ಗುರುತಿಸುವುದು ನಮ್ಮ ಕರ್ತವ್ಯ. ಎಲ್ಲಾ ಇಂಜಿನಿಯರ್ ಗಳು ರಾಜ್ಯದ ಉದ್ದಗಲ ಗಮನಿಸಬೇಕು. ಇದರ ರೂಪುರೇಷೆಗಳನ್ನು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.

ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು

“ಇಂದು ಇಂಜಿನಿಯರ್ ಗಳ ದಿನವಾಗಿದ್ದು, ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ಸರ್ಕಾರದ ಪರವಾಗಿ ಮಾಲಾರ್ಪಣೆ ಮಾಡಲಾಗಿದೆ. ಇಂಜಿನಿಯರ್ ಗಳು ದೇಶದ ಆಸ್ತಿ. ವಿಜ್ಞಾನಿಗಳ ಸಂಶೋಧನೆಗಳನ್ನು ಕಾರ್ಯಗತಗೊಳಿಸುತ್ತಿರುವವರು ಇಂಜಿನಿಯರ್ ಗಳು. ಎಲ್ಲಾ ಅಭಿವೃದ್ಧಿಗೆ ಅಡಿಪಾಯ ಹಾಕುವವರು ಇಂಜಿನಿಯರ್ ಗಳು. ವಾಸ್ತುಶಿಲ್ಪದ ಪರಂಪರೆಯಲ್ಲಿ ನಾವು ಇಂಜಿನಿಯರ್ ಗಳನ್ನು ಗುರುತಿಸುತ್ತಿದ್ದೆವು. ಈಗ ಇಂಧನ, ಕಟ್ಟಡ ನಿರ್ಮಾಣ, ಐಟಿ ತಂತ್ರಜ್ಞಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ವಿಶ್ವೇಶ್ವರಯ್ಯ ಅವರು ದೇಶಕ್ಕೆ ಮಾದರಿ. ಕರ್ನಾಟಕಕ್ಕೆ ಅವರ ಕೊಡುಗೆ ಅಪಾರ” ಎಂದು ತಿಳಿಸಿದರು.

 

Source link

LEAVE A REPLY

Please enter your comment!
Please enter your name here

Share post:

Popular

More like this
Related

US Fed வங்கியின் வட்டி விகித உயர்வை விரும்பாத ட்ரம்ப்; Upset-ல் பிற நாடுகளை குற்றம்சாட்டுவது என்ன?

நேற்று அமெரிக்காவின் மத்திய வங்கியான ஃபெடரல் ரிசர்வ் 0.25% வட்டி விகித...

PM Modi: ప్రధాని మోడీ స్నేహితుడికి ఊరట.. స్థలాన్ని వదులకున్న బీజేపీ ఎమ్మెల్యే..

PM Modi: ఇటీవల ప్రధాని నరేంద్రమోడీని ఆయన చిన్ననాటి మిత్రుడు అస్గర్...

ಅಪಘಾತಕ್ಕೀಡಾದ ನರಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ಚೆಸ್ಕಾಂ ಅಧಿಕಾರಿ..

ಮೈಸೂರು,ಸೆಪ್ಟಂಬರ್,17,2026 (www.justkannada.in):  ರಸ್ತೆ ಅಪಘಾತದಲ್ಲಿ ಗಾಯಗೊಂಡು ಸಾವು-ನೋವಿನ ನಡುವೆ ನರಳುತ್ತಿದ್ದ...

സഖ്യകക്ഷികൾ ഒഴിഞ്ഞുമാറുന്നു; ഹൂതികൾക്ക് മുന്നിൽ പ്രതിസന്ധിയിലായി സൗദി അറേബ്യ

റിയാദ്: യെമനിലെ ഹൂതി വിമതരുടെ ആക്രമണം വീണ്ടും ശക്തമായതോടെ സൗദി അറേബ്യ...