19
February, 2025

A News 365Times Venture

19
Wednesday
February, 2025

A News 365Times Venture

ರಾಜ್ಯದಲ್ಲಿ ಹದಗೆಟ್ಟ ಕಾನೂನು ವ್ಯವಸ್ಥೆ, ಜನರ ರಕ್ಷಣೆ ಮಾಡುವವರೇ ಇಲ್ಲ: ಆರ್‌.ಅಶೋಕ್  ಆಕ್ರೋಶ

Date:

ಬೆಂಗಳೂರು, ಜನವರಿ 18, 2025 (www.justkannada.in):  ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಕಾನೂನು ವ್ಯವಸ್ಥೆ ಹದಗೆಟ್ಟಿದೆ.  ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್ ಅವರು, ಬೀದರ್‌ ನಲ್ಲಿ ಬ್ಯಾಂಕ್‌ನ ಹಣದ ದರೋಡೆ ಹಾಗೂ ಸಿಬ್ಬಂದಿ ಕೊಲೆ ನಡೆದಿದೆ. ಮಂಗಳೂರಿನಲ್ಲಿ ಹಾಲಿವುಡ್‌ ಸಿನಿಮಾ ಶೈಲಿಯಲ್ಲಿ 15 ಕೋಟಿ ರೂ. ಬ್ಯಾಂಕ್‌ ಹಣ ಲೂಟಿಯಾಗಿದೆ. ರಾಜ್ಯದ ಪೊಲೀಸರ ಬಗ್ಗೆ ಯಾರಿಗೂ ಭಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪೊಲೀಸ್‌ ಅಧಿಕಾರಿಗಳ ಮೇಲೆ ಎಷ್ಟು ಹಿಡಿತ ಇದೆ ಎಂದು ಇದರಿಂದ ತಿಳಿಯುತ್ತದೆ. ರಾಜ್ಯದ ಕಾನೂನು ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದು ಗೊತ್ತಾಗಿದೆ ಎಂದರು.

ಬೇರೆ ರಾಜ್ಯಗಳಿಂದ ಕಳ್ಳರು ಬಂದು ದರೋಡೆ ಮಾಡಿಕೊಂಡು ಬಸ್ಸು, ರೈಲಿನಲ್ಲಿ ಹೋಗುತ್ತಿದ್ದಾರೆ. ಜನರು ಅವರ ರಕ್ಷಣೆಯನ್ನು ಅವರೇ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಪೊಲೀಸರ ಕೈಯಲ್ಲಿ ಪಿಸ್ತೂಲ್‌ ಇಲ್ಲ. ಆದರೆ ದರೋಡೆ ಮಾಡುವವರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳಿವೆ ಎಂದರು.

ಲವ್‌ ಜಿಹಾದ್‌, ಕೋಮುಗಲಭೆ, ಹಸುಗಳ ಕೆಚ್ಚಲು ಕತ್ತರಿಸಿದ್ದು ಮೊದಲಾದ ಘಟನೆಗಳ ವಿರುದ್ಧ ಕಠಿಣ ಕ್ರಮ ವಹಿಸಲಿಲ್ಲ. ಪೊಲೀಸ್‌ ಇಲಾಖೆ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದು, ಅಧಿಕಾರಿಗಳು ಸಾಯುತ್ತಿದ್ದಾರೆ. ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಇಲಾಖೆಯ ಸಭೆ ಕರೆದು ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್‌-ಸತೀಶ್‌ ಜಾರಕಿಹೊಳಿ ಗಲಾಟೆ, ಸಿಎಂ ನಿರ್ಗಮನ ಮೊದಲಾದ ರಾಜಕೀಯದಲ್ಲೇ ಸರ್ಕಾರ ಮುಳುಗಿದೆ. ಹೀಗಾಗಿ ಅಧಿಕಾರಿಗಳಿಗೆ ಕೆಲಸ ಮಾಡಲು ಆಸಕ್ತಿ ಇಲ್ಲ ಎಂದು ದೂರಿದರು.

ಕರ್ನಾಟಕ ದರೋಡೆಕೋರರ ಸ್ವರ್ಗವಾಗಿರುವುದರಿಂದ ಹೂಡಿಕೆದಾರರು ಮುಂದೆ ಬರುತ್ತಿಲ್ಲ. ಇದು ಪಶ್ಚಿಮ ಬಂಗಾಳದಂತೆಯೇ ಆಗುತ್ತಿದೆ. ಎಲ್ಲರೂ ಆತಂಕದಲ್ಲೇ ಬದುಕುತ್ತಿದ್ದಾರೆ ಎಂದರು.

ಶ್ವೇತಪತ್ರ ಬಿಡುಗಡೆ ಮಾಡಿ

ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ.  ಸಿಎಂ ಸಿದ್ದರಾಮಯ್ಯ ಎಷ್ಟು ಅನುದಾನ ನೀಡಿದ್ದಾರೆ ಎಂದು ಶ್ವೇತಪತ್ರ ಬಿಡುಗಡೆ ಮಾಡಲಿ. ಬಿಜೆಪಿ ಅವಧಿಯಲ್ಲಿ ಎಷ್ಟು ಸಾಲ ಮಾಡಲಾಗಿದೆ, ಕಾಂಗ್ರೆಸ್‌ ಅವಧಿಯಲ್ಲಿ 60 ವರ್ಷಗಳಲ್ಲಿ ಎಷ್ಟು ಸಾಲ ಮಾಡಲಾಗಿದೆ ಎಂದು ಕೂಡ ತಿಳಿಸಲಿ ಎಂದು ಆರ್.ಅಶೋಕ್ ಸವಾಲೆಸೆದರು.

ಕ್ಲೀನ್‌ ಚಿಟ್‌ ಗೆ ಸಿದ್ಧತೆ

ಮುಡಾಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ನನಗೆ ಉತ್ತರ ನೀಡಿಲ್ಲ. ಲೋಕಾಯುಕ್ತ ಪೊಲೀಸರು ತನಿಖೆ ಮಾಡಲು ಆಸಕ್ತಿ ತೋರದೆ ಕ್ಲೀನ್‌ ಚಿಟ್‌ ನೀಡಲು ಸಿದ್ಧತೆ ಮಾಡಿಕೊಂಡಿರುವಂತಿದೆ. ಜಾರಿ ನಿರ್ದೇಶನಾಲಯ ಮಧ್ಯವರ್ತಿಗಳ ಹಣವನ್ನು ವಶಕ್ಕೆ ಪಡೆದಿದೆ. ಆದರೆ ಲೋಕಾಯುಕ್ತ ಪೊಲೀಸರು ಏನೂ ಮಾಡಿಲ್ಲ. ಆದ್ದರಿಂದ ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದ್ದೇವೆ ಎಂದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಹೆಚ್ಚಿವೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಬದುಕಿಗೆ ಗ್ಯಾರಂಟಿ ಇಲ್ಲ. ಇಂತಹ ಪರಿಸ್ಥಿತಿಯಲ್ಲೂ ಸರ್ಕಾರ ದರ ಏರಿಕೆ ಮಾಡುತ್ತಿದೆ. ಈ ರೀತಿ ಮಾಡುವ ಬದಲು ಒಂದೇ ಬಾರಿಗೆ ದರ ಏರಿಕೆ ಮಾಡಲಿ ಎಂದರು.

Key words: Karnataka  legal system, deteriorated,  R. Ashok

The post ರಾಜ್ಯದಲ್ಲಿ ಹದಗೆಟ್ಟ ಕಾನೂನು ವ್ಯವಸ್ಥೆ, ಜನರ ರಕ್ಷಣೆ ಮಾಡುವವರೇ ಇಲ್ಲ: ಆರ್‌.ಅಶೋಕ್  ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മഹായുതിയില്‍ ഭിന്നത; ‘വൈ’ കാറ്റഗറി സുരക്ഷയില്‍ ഷിന്‍ഡെക്ക് അതൃപ്തിയെന്ന് റിപ്പോര്‍ട്ട്

മുംബൈ: 2024 നിയമസഭാ തെരഞ്ഞെടുപ്പിന് ശേഷം മഹാരാഷ്ട്രയിലെ ബി.ജെ.പി നേതൃത്വത്തിലുള്ള മഹായുതി...

"தமிழ்நாடு இன்னொரு மொழிப்போரைச் சந்திக்கவும் தயங்காது…" – உதயநிதி எச்சரிக்கை!

மத்திய கல்வித்துறை அமைச்சர் தர்மேந்திர பிரதான், 'தமிழ்நாடு அரசு புதிய கல்விக்...

Vijayawada Metro Project: స్పీడందుకున్న విజయవాడ మెట్రో రైల్ ప్రాజెక్ట్ పనులు..!

Vijayawada Metro Project: విజయవాడ మెట్రో రైలు ప్రాజెక్టుకు సంబంధించి పనులు...