13
February, 2025

A News 365Times Venture

13
Thursday
February, 2025

A News 365Times Venture

ವಸ್ತುಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ ಸಿದ್ದರಾಮಯ್ಯ

Date:

ತುಮಕೂರು ಜನವರಿ, 18,2025 (www.justkannada.in):  ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ನುಡಿದರು.

ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ  ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.

ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ

ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು,

ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಢ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ. ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ , ಸವಾಲು ಎರಡೂ ಆಗಿದೆ ಎಂದರು.

ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೆಲವೇ ದಿನದಲ್ಲಿ ಬಸ್ ಪಾಸ್

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ  ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು.

ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂದನೆ

ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.

Key words: 39th State Conference of Journalists, journalism, CM Siddaramaiah

The post ವಸ್ತುಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ: ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ: ಸಿ.ಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗುಪ್ತಚರ ಎಂ.ಲಕ್ಷ್ಮಣ ಮತ್ತು ಭಾರತೀಯ ನ್ಯಾಯಸಂಹಿತೆ..!

ಮೈಸೂರು,ಫೆಬ್ರವರಿ,13,2025 (www.justkannada.in): ವ್ಯಕ್ತಿಯೊಬ್ಬನ ಅವಹೇಳನಕಾರಿ ಪೋಸ್ಟ್ ವಿಚಾರವಾಗಿ ಮೈಸೂರಿನ ಉದಯಗಿರಿ...

അശ്ലീലപരാമര്‍ശം; യൂട്യൂബര്‍ രണ്‍ബീര്‍ അല്ലാഹ്ബാദിയ ഉള്‍പ്പെടെയുള്ളവര്‍ക്കെതിരെ അസമിലും കേസ്

റായ്പൂര്‍: യൂട്യൂബ് ഷോയായ ഇന്ത്യാസ് ഗോട്ട് ലാറ്റന്റിലെ പോഡ്കാസ്റ്ററും യൂട്യൂബറുമായ രണ്‍വീര്‍...

Tulsi Gabbard: அமெரிக்க உளவுத்துறை தலைவரை சந்தித்த மோடி! – யார் இந்த துளசி கபார்ட்?

அமெரிக்க உளவுத்துறை தலைவர் துளசி கபார்டை பிரதமர் நரேந்திர மோடி சந்தித்து...

Delhi New CM: ఢిల్లీ సీఎం ఎంపికకు ముహూర్తం ఖరారు.. ఎప్పుడంటే..!

ఢిల్లీ అసెంబ్లీ ఎన్నికల్లో బీజేపీ ఘన విజయం సాధించింది. 27 ఏళ్ల...