ಕೋಲ್ಕತ್ತಾ,ಜನವರಿ,18,2025 (www.justkannada.in): ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದ ಕೋಲ್ಕತ್ತಾದ ಆರ್‌ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋಲ್ಕತ್ತಾದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅನಿರ್ ಬಾನ್ ದಾಸ್ ಅವರು, ಕೇವಲ 57 ದಿನಗಳಲ್ಲೇ ಪ್ರಕರಣದ ತೀರ್ಪು ಪ್ರಕಟಿಸಿದ್ದು, ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದಿದ್ದಾರೆ . ಶಿಕ್ಷೆಯ ಪ್ರಮಾಣವನ್ನು ಜನವರಿ 20 ರಂದು ಪ್ರಕಟಿಸುವುದಾಗಿ ತಿಳಿಸಿದ್ದು ಅಂದು ಮಧ್ಯಾಹ್ನ 12.30ಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ. ಆರೋಪಿ ಸಂಜಯ್ ರಾಯ್ ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
ಕಳೆದ ಆಗಸ್ಟ್ 9 ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯ ಶವ ಪತ್ತೆಯಾಗಿತ್ತು. ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಸಂಜಯ್ ರಾಯ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಲಾಗಿತ್ತು.
Key words: Kolkata, medical student, rape, murder, case, Sanjay Roy, guilty, Court
The post ಕೋಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಕೇಸ್: ಸಂಜಯ್ ರಾಯ್ ತಪ್ಪಿತಸ್ಥ ; ಕೋರ್ಟ್ ತೀರ್ಪು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.