ಬೆಳಗಾವಿ, ಜನವರಿ 20,2025 (www.justkannada.in): ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ಕೆಲವು ಸಚಿವರು ಅಸಮಾಧಾನಗೊಂಡಿದ್ದಾರೆ ಎಂಬ ಬಗ್ಗೆ ಸುದ್ದಿಯಾದ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಸುಳ್ಳು ಹೇಳಿ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.
ನಿನ್ನೆ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಆಸೀಫ್ ಸೇಠ್ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಿನ್ನೆ ಪಕ್ಷದ ಹಿರಿಯ ನಾಯಕರ ನಿವಾಸಕ್ಕೆ ಭೇಟಿ ನೀಡಿದ್ದೆ. ಜಗಳ ಇತ್ತು ಅದಕ್ಕೆ ಹೋಗಿದ್ದರು ಎಂದು ನೀವು ಹೇಳುತ್ತಿದ್ದೀರಿ. ಫಿರೋಜ್ ಸೇಠ್ ಹಿರಿಯರು, ಅವರ ಜತೆ ಕೆಲಸ ಮಾಡಿದ್ದೇವೆ. ಸಂಘಟನೆ ದೃಷ್ಟಿಯಿಂದ ನಿವಾಸಕ್ಕೆ ಹೋಗಿ ಬಂದಿದ್ದೆ ಎಂದು ಮಾಧ್ಯಮಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.
ರಣದೀಪ್ ಸಿಂಗ್ ಸುರ್ಜೇವಾಲ ಎಲ್ಲರನ್ನೂ ಒಂದೇ ರೀತಿ ನಡೆಸಿಕೊಳ್ಳುತ್ತಿಲ್ಲ. ಅವರ ಬಗ್ಗೆ ರಾಹುಲ್ ಗಾಂಧಿಯವರಿಗೆ ದೂರು ನೀಡಬೇಕು. ರಾಜ್ಯ ಉಸ್ತುವಾರಿಯಿಂದ ವಾಪಸ್ ಕರೆಸಿಕೊಳ್ಳುವಂತೆ ಒತ್ತಡ ಹೇರಬೇಕು’ ಎಂದು ಸಿಎಂ ಸಿದ್ದರಾಮಯ್ಯಗೆ ಕೆಲವು ಮಂದಿ ಸಚಿವರು ಮನವಿ ಮಾಡಿದ್ದಾರೆ ಎಂದು ವರದಿಯಾಗಿತ್ತು.
Key words: Ministers, dissatisfaction, Surjewala, DK Shivakumar
The post ಸುರ್ಜೇವಾಲ ವಿರುದ್ಧ ಸಚಿವರ ಅಸಮಾಧಾನ ವಿಚಾರ: ಸುಳ್ಳು ಹೇಳಿ ವರ್ಚಸ್ಸು ಹಾಳು ಮಾಡ್ತಿದ್ದಾರೆ- ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.