13
February, 2025

A News 365Times Venture

13
Thursday
February, 2025

A News 365Times Venture

ಗ್ಯಾರಂಟಿ ಯೋಜನೆ ಮೂಲಕ ಪ್ರತಿವರ್ಷ ಒಂದು ತಾಲ್ಲೂಕಿಗೆ ಅಂದಾಜು ರೂ 220 ಕೋಟಿ: ಸಚಿವ ಎನ್ ಚಲುವರಾಯಸ್ವಾಮಿ

Date:

ಮಂಡ್ಯ,ಜನವರಿ,20,2025 (www.justkannada.in): ಹಲವಾರು ವಿರೋಧಗಳ  ನಡುವೆ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಯಿತು. ಈ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಇಂದು ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಜನರು ಕಚೇರಿಗಳಿಗೆ ಅಲೆದಾಟುವಂತಿಲ್ಲ‌, ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತದೆ ಎಂದರು.

ಸಮಸ್ಯೆ ಪರಿಹಾರವಾದ ನಂತರ ಪರಿಹಾರವಾಗಿದೆ ಎಂದು ಯಾರು ಅಭಿನಂದನೆ ಸಲ್ಲಿಸುವುದಿಲ್ಲ. ಹೊಸ ಸಮಸ್ಯೆಗಳ ಪರಿಹಾರಕ್ಕೆ ಅರ್ಜಿ ಸಲ್ಲಿಕೆಯಾಗುತ್ತದೆ‌. ಸಾರ್ವಜನಿಕರ ಕೆಲಸ ಮಾಡುವುದು ಜನಪ್ರತಿನಿಧಿಗಳ ಕೆಲಸ ಎಂಬ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು ಎಂದರು.

ಕರ್ನಾಟಕ ರಾಜ್ಯ ಸಾರ್ವಜನಿಕರಿಗೆ ನೀಡುವ ಕಾರ್ಯಕ್ರಮಗಳಿಗೆ ಸಂಗ್ರಹಿಸುವ ಫಲಾನುಭವಿಗಳ  ವಿವರಗಳ ಬಗ್ಗೆ ಬೇರೆ ರಾಜ್ಯಗಳು ಮೆಚ್ಚುಗೆ ವ್ಯಕ್ತಪಡಿಸಿ, ವಿವರ ಸಂಗ್ರಹಿಸಲು ರೂಪಿಸಿರುವ ತಂತ್ರಜ್ಞಾನವನ್ನು ಹಂಚಿಕೊಳ್ಳುವಂತೆ ಮನವಿ ಸಲ್ಲಿಸಿರುವುದು ಹರ್ಷದಾಯಕ ವಿಷಯವಾಗಿದೆ ಎಂದರು.

ಕೊಪ್ಪ ಹೋಬಳಿಯಲ್ಲಿ ಇದು ಎರಡನೇ ಬಾರಿಗೆ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸ್ವೀಕರಿಸುವ ಕುಂದು ಕೊರತೆ ಅರ್ಜಿಗಳನ್ನು ಕಾನೂನು ಚೌಕಟ್ಟಿನಲ್ಲಿ ಪರಿಹರಿಸಲಾಗುವುದು ಎಂದರು.

ಕೊಪ್ಪದಲ್ಲಿ ಬೇಡಿಕೆ ಇರುವ ಪೊಲೀಸ್ ಠಾಣೆ ನಿರ್ಮಾಣ, ನಾಡ ಕಚೇರಿ ಹಾಗೂ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದಲ್ಲದೇ ಪಂಚಾಯಿತಿ ಕಚೇರಿ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಸುಮಾರು 1 ಕೋಟಿ ವೆಚ್ಚವಾಗಲಿದೆ ಎಂದರು.

ಸಹಕಾರ ಸಂಘದ ಮೂಲಕ ರೂ.1 ಕೋಟಿ ಸಾಲ ಕೊಪ್ಪ ಹಾಗೂ ಸುತ್ತಮುತ್ತಲಿನ 16 ಹಳ್ಳಿಗಳ ಕೃಷಿ ಪತ್ತಿನ ಸಹಕಾರ ಸಂಘ  ಹಲವಾರು ಕಾರಣಗಳಿಂದ ಕೆಲಸ ಸ್ಥಗಿತಗೊಳಿಸಿತ್ತು. ಇದನ್ನು ಸರಿಪಡಿಸಿ ರೈತರು ಹಾಗೂ ಮಹಿಳೆಯರಿಗೆ ಆರ್ಥಿಕವಾಗಿ ಸದೃಢರಾಗಲು ಬಡ್ಡಿರಹಿತವಾಗಿ 1 ಕೋಟಿ ರೂ. ವರೆಗೆ ಸಾಲ ನೀಡಲಾಗಿದೆ. ಇದಕ್ಕೆ ನಬಾಡ್೯ ವಿಧಿಸುವ ಬಡ್ಡಿಯನ್ನು ಸರ್ಕಾರ ಭರಿಸುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ಹೈನುಗಾರಿಕೆ ಕೃಷಿ ಸಂಬಂಧಿಸಿದ ಇಲಾಖೆಗಳ ಮೂಲಕ ಕೊಪ್ಪ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಸುಮಾರು 2000 ಫಲಾನುಭವಿಗಳಿಗೆ 1.96 ಕೋಟಿ ರೂ ಸಹಾಯಧನ ನೀಡಲಾಗಿದೆ ಎಂದರು.

ಪೌತಿ ಖಾತೆ ಆಂದೋಲನಕ್ಕೆ ಸಂಬಂಧಿಸಿದಂತೆ ಕಳೆದ ಒಂದುವರೆ ತಿಂಗಳಿನಿಂದ ಕೊಪ್ಪ ವ್ಯಾಪ್ತಿಯಲ್ಲಿ 1275 ಅರ್ಜಿ ಸ್ವೀಕರಿಸಿ ಸುಮಾರು 443 ಪೌತಿ ಖಾತೆ ಮಾಡಿಕೊಡಲಾಗಿದೆ. ಪೌತಿ ಖಾತೆ ಮಾಡಿಸಿಕೊಳ್ಳಲು ರೈತರು ಸಹ ಆಸಕ್ತಿ‌ ತೋರಿಸಿ ಮುಂದೆ ಬರಬೇಕು. ದಾಖಲೆ, ಆರ್.ಟಿ.ಸಿ ಗಳು ಸರಿಯಿದ್ದರೆ ಮಾತ್ರ ಬ್ಯಾಂಕ್ ಅಥವಾ ಸೊಸೈಟಿಗಳಿಂದ ಸಾಲ ಪಡೆಯಲು ಸಾಧ್ಯ ಎಂದರು.

ರೈತರ ಭೂಮಿ ಹಾಗೂ ಇನ್ನಿತರೆ ದಾಖಲೆಗಳನ್ನು ಕಂದಾಯ ಇಲಾಖೆ ಡಿಜಿಟಲ್ ಮಾಡುವ ಭೂ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ 36 ಲಕ್ಷ ದಾಖಲೆಗಳನ್ನು ಡಿಜಟಲೀಕರಣ ಮಾಡಲಾಗಿದೆ ಎಂದರು.

ಕಂದಾಯ ಇಲಾಖೆಯಲ್ಲಿ ಜನಪರ ಕೆಲಸಗಳು ನಡೆಯುತ್ತಿದ್ದು, ಸುಮಾರು 67 ಲಕ್ಷ ಪೌತಿ ಖಾತೆ, ಹಲವಾರು ವರ್ಷಗಳಿಂದ ಬಾಕಿ ಇದ್ದ ಕೋಟ್೯ ಪ್ರಕರಣಗಳನ್ನು ಒಂದು ವರ್ಷದಲ್ಲಿ 16000 ವಿಲೇವಾರಿ ಮಾಡಲಾಗಿದೆ. 18 ಲಕ್ಷ ಆರ್.ಟಿ.ಸಿ ಗಳಿಗೆ ಆಧಾರ್ ಜೋಡಣೆ ಕೆಲಸ ಮಾಡಲಾಗಿದೆ ಎಂದರು.

ಇತಿಹಾಸದಲ್ಲೇ ಮೊದಲ ಬಾರಿಗೆ ನಿರಂತರ 154 ದಿನಗಳು ಕೆ.ಆರ್.ಎಸ್ ನಲ್ಲಿ ನೀರು ತುಂಬಿರುವುದು ಸಂತೋಷದ ವಿಷಯವಾಗಿದೆ. ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗಿದೆ  ಬೆಳಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲು ಪ್ರಾರಂಭಿಸಲಾಗಿದೆ. ರೈತರು ಬಿತ್ತನೆ ಕೆಲಸಗಳನ್ನು ಪ್ರಾರಂಭಿಸುವಂತೆ ತಿಳಿಸಿದರು.

ರೈತರಿಗೆ ಹೆಚ್ಚು ಉಪಯುಕ್ತವಾಗಲಿ ಎಂದು ರೈತರು ಹೆಚ್ಚಿರುವ ಜಿಲ್ಲೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ನಲ್ಲಿ ಪ್ರಾರಂಭಿಸಲಾಗುವುದು. ಇಲ್ಲಿ ಕೃಷಿ ತಜ್ಞರು ರೈತರಿಗೆ ಹಲವಾರು ಉಪಯುಕ್ತ ಮಾಹಿತಿಯನ್ನು ನೀಡಲಿದ್ದಾರೆ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಜನರ ಸಮಸ್ಯೆಗಳನ್ನು ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಎರಡನೇ ಬಾರಿಗೆ ಕೊಪ್ಪದಲ್ಲಿ ಆಯೋಜಿಸಲಾಗಿದ್ದು, ಈ ಹಿಂದೆ ಸ್ವೀಕೃತವಾರ ಕುಂದು ಕೊರತೆ ಅರ್ಜಿಗಳಿಗೆ ಪರಿಹಾರ ಒದಗಿಸಲಾಗಿದೆ ಎಂದರು.

ಕಂದಾಯ ಇಲಾಖೆ ಚುರುಕಾಗಿ ಕೆಲಸ ನಿರ್ವಹಿಸುತ್ತಿದ್ದು, ಸ್ವಯಂ ಪ್ರೇರಿತವಾಗಿ ಪೌತಿ ಖಾತೆ ಆಂದೋಲನ, ಪೋಡಿ ದುರಸ್ತಿ, ಆಧಾರ ಸೀಡಿಂಗ್ ಕೆಲಸಗಳನ್ನು ಮನೆ ಮನೆಗೆ ಭೇಟಿ ನೀಡಿ ದಾಖಲೆ ಸಂಗ್ರಹಿಸಿಕೊಂಡು ಮಾಡಿಕೊಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್,ಮಂಡ್ಯ ಉಪವಿಭಾಗಾಧಿಕಾರಿ ಶಿವ ಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Rs 220 crore, per taluk, guarantee scheme, Minister, N Chaluvarayaswamy

The post ಗ್ಯಾರಂಟಿ ಯೋಜನೆ ಮೂಲಕ ಪ್ರತಿವರ್ಷ ಒಂದು ತಾಲ್ಲೂಕಿಗೆ ಅಂದಾಜು ರೂ 220 ಕೋಟಿ: ಸಚಿವ ಎನ್ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗುಪ್ತಚರ ಎಂ.ಲಕ್ಷ್ಮಣ ಮತ್ತು ಭಾರತೀಯ ನ್ಯಾಯಸಂಹಿತೆ..!

ಮೈಸೂರು,ಫೆಬ್ರವರಿ,13,2025 (www.justkannada.in): ವ್ಯಕ್ತಿಯೊಬ್ಬನ ಅವಹೇಳನಕಾರಿ ಪೋಸ್ಟ್ ವಿಚಾರವಾಗಿ ಮೈಸೂರಿನ ಉದಯಗಿರಿ...

അശ്ലീലപരാമര്‍ശം; യൂട്യൂബര്‍ രണ്‍ബീര്‍ അല്ലാഹ്ബാദിയ ഉള്‍പ്പെടെയുള്ളവര്‍ക്കെതിരെ അസമിലും കേസ്

റായ്പൂര്‍: യൂട്യൂബ് ഷോയായ ഇന്ത്യാസ് ഗോട്ട് ലാറ്റന്റിലെ പോഡ്കാസ്റ്ററും യൂട്യൂബറുമായ രണ്‍വീര്‍...

Tulsi Gabbard: அமெரிக்க உளவுத்துறை தலைவரை சந்தித்த மோடி! – யார் இந்த துளசி கபார்ட்?

அமெரிக்க உளவுத்துறை தலைவர் துளசி கபார்டை பிரதமர் நரேந்திர மோடி சந்தித்து...

Delhi New CM: ఢిల్లీ సీఎం ఎంపికకు ముహూర్తం ఖరారు.. ఎప్పుడంటే..!

ఢిల్లీ అసెంబ్లీ ఎన్నికల్లో బీజేపీ ఘన విజయం సాధించింది. 27 ఏళ్ల...