ಬೆಂಗಳೂರು,ಜನವರಿ,20,2025 (www.justkannada.in): ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿ ಇರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದಿರುವ ಹಲ್ಲೆ ಅಮಾನವೀಯವಾಗಿದೆ. ತಪ್ಪಿತಸ್ಥರನ್ನು ಬಂಧಿಸಿದ್ದು, ಕಠಿಣ ಕಾನೂನು ಕ್ರಮವನ್ನೂ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಘಟನೆಯ ಬಗ್ಗೆ ಸಚಿವ ಎಂ.ಬಿ ಪಾಟೀಲ್ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ವಿಧಾನಸೌಧದಲ್ಲಿ ಸೋಮವಾರ ಉತ್ತರಿಸಿದ್ದಾರೆ.
ಇಟ್ಟಿಗೆ ಭಟ್ಟಿಯಲ್ಲಿ ನಡೆದಿರುವ ಘಟನೆ ಬಗ್ಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠರ ಜತೆ ಮಾತನಾಡಿ, ಸೂಕ್ತ ಕ್ರಮ ಜರುಗಿಸಲು ಸೂಚಿಸಿದ್ದೇನೆ. ಅಲ್ಲಿನ ಜಿಲ್ಲಾಧಿಕಾರಿಗಳು ಕರ್ತವ್ಯದ ಮೇಲೆ ಬೆಂಗಳೂರಿನಲ್ಲೇ ಇದ್ದಾರೆ. ಅವರೊಂದಿಗೂ ಈ ಬಗ್ಗೆ ಮಾತನಾಡಿರುವೆ. ತಪ್ಪಿತಸ್ಥರನ್ನು ಹಾಗೆಯೇ ಬಿಡುವ ಪ್ರಶ್ನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಿಜಯಪುರದಲ್ಲಿ ಹಬ್ಬದ ಆಚರಣೆಯ ನಂತರ ಕೆಲಸಕ್ಕೆ ತಡವಾಗಿ ಬಂದಿದ್ದ ಕಾರ್ಮಿಕರನ್ನು ಮಾಲೀಕನು ಅಮಾನುಷವಾಗಿ ಥಳಿಸಿರುವ ಆಘಾತಕಾರಿ ಘಟನೆ ಸೋಮವಾರ ನಡೆದಿತ್ತು. ಗಾಂಧಿನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಕಾರ್ಖಾನೆಯಲ್ಲಿ ಮೂವರು ಕಾರ್ಮಿಕರಿಗೆ ರಾಡ್‌ನಿಂದ ಹಲ್ಲೆ ನಡೆಸಿರುವ ವೀಡಿಯೊ ವೈರಲ್ ಆಗಿದ್ದು, ವ್ಯಾಪಕ ಕಳವಳವನ್ನು ಉಂಟುಮಾಡಿದೆ.
Key words: Attack, worker, inhumane, Minister, M.B. Patil
The post ಕಾರ್ಮಿಕನ ಮೇಲೆ ಹಲ್ಲೆ ಅಮಾನವೀಯ: ತಪ್ಪಿತಸ್ಥರ ಬಂಧನ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.