29
September, 2026

A News 365Times Venture

29
Tuesday
September, 2026

A News 365Times Venture

‘ಗಾಂಧಿ ಭಾರತ ಮರು ನಿರ್ಮಾಣ’ ಪುಸ್ತಕಗಳ ಲೋಕಾರ್ಪಣೆ

Date:

ಬೆಳಗಾವಿ,ಜನವರಿ, 21,2025 (www.justkannada.in):  1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ “ಗಾಂಧಿ ಭಾರತ ಮರು ನಿರ್ಮಾಣ” ಹಾಗೂ Reclaiming Gandhi Bharath  ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ  ಬಿಡುಗಡೆ ಮಾಡಿದರು.

ಸುವರ್ಣಸೌಧದ ಆವರಣದಲ್ಲಿ ಸ್ಥಾಪಿಸಿರುವ ಬೃಹತ್ ಗಾಂಧಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಈ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

1924 ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು,ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ, ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ, ಅಕಾಲಿಗಳಿಗೆ ಅಭಿನಂದನೆ, ರಾಷ್ಟ್ರೀಯ ಶಿಕ್ಷಣ  ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು, ಅಸ್ಪೃಶ್ಯತೆ ನಿವಾರಣೆ,ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು  ಈ ಪುಸ್ತಕಗಳು ಒಳಗೊಂಡಿವೆ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್, ಸಂಸದರಾದ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಎಚ್.ಕೆ.ಪಾಟೀಲ್, ಡಾ.ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ  ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.

Key words: Reclaiming, Gandhi Bharath, CM Siddaramaiah

The post ‘ಗಾಂಧಿ ಭಾರತ ಮರು ನಿರ್ಮಾಣ’ ಪುಸ್ತಕಗಳ ಲೋಕಾರ್ಪಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Rohit Sharma: రోహిత్ శర్మకు ప్రమాదం.. బస్ దిగుతుండగా కాలుజారి పడిపోయిన హిట్ మ్యాన్..

తిరువనంతపురంలో వెస్టిండీస్‌తో జరిగిన మొదటి వన్డే మ్యాచ్‌లో భారత్ విజయం సాధించిన...

ಪ್ರೀತಿಗೆ ನಿರಾಕರಣೆ: ಪೆಟ್ರೋಲ್ ಸುರಿದು, ಯುವತಿ ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ಮೈಸೂರು, ಸೆಪ್ಟಂಬರ್,29, 2026 (www.justkannada.in):  ಪ್ರೀತಿಸುವಂತೆ ನಿರಂತರವಾಗಿ ದುಂಬಾಲು ಬಿದ್ದಿದ್ದ...

‘വിഷം പഠിപ്പിക്കുന്നു’; സര്‍വകലാശാലാ പാഠ്യപദ്ധതിയിലെ അംബേദ്കര്‍ രചനകളില്‍ പ്രധാനമന്ത്രിയുടെ ഓഫീസിന്റെ പരിശോധന

ന്യൂദല്‍ഹി: രാജ്യത്തെ സര്‍വകലാശാലകളിലെ പാഠ്യപദ്ധതിയില്‍ ഉള്‍പ്പെടുത്തിയിട്ടുള്ള അബേദ്ക്കറിന്റെ രചനകളെക്കുറിച്ച് പ്രധാനമന്ത്രിയുടെ ഓഫീസ്...

மின்சாரத்துறையில் தனியார்: “இதற்கு பெயர்தான் தூய ஆட்சியா? வெட்கக்கேடு! " – சீமான் காட்டம்

வீடுகளில் மின் பயன்பாட்டைக் கணக்கெடுக்கும் பணியில் தனியார் ஒப்பந்த நிறுவனங்களின் மூலம்...