13
March, 2026

A News 365Times Venture

13
Friday
March, 2026

A News 365Times Venture

ಕೇಂದ್ರ ಬಜೆಟ್​​: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ

Date:

ಬೆಂಗಳೂರು, ಜನವರಿ 25,2025 (www.jsutkannada.in):  ಫೆಬ್ರವರಿ 1 ರಂದು  ಕೇಂದ್ರ ಬಜೆಟ್ ಮಂಡನೆಯಾಗಲಿದ್ದು,  ಈ ಹಿನ್ನೆಲೆಯಲ್ಲಿ ಕೇಂದ್ರ ಬಜೆಟ್​​ ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ ಬರೆದಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್ ​ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್​​ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ. ಬೆಂಗಳೂರಿನ ಪ್ರಮುಖ 17 ಫ್ಲೈ ಓವರ್​ಗೆ 12 ಸಾವಿರ ಕೋಟಿ ರೂ ಅಗತ್ಯವಿದೆ. ರಾಜ ಕಾಲುವೆ ನಿರ್ಣಹಣೆ, ವಿಸ್ತರಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಬೆಂಗಳೂರಿನಲ್ಲಿ ಸದ್ಯ ಒಂದುವರೆ ಕೋಟಿ ಜನಸಂಖ್ಯೆ ಇದೆ. ಬಿಸಿನೆಸ್ ಕಾರಿಡಾರ್ ​ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ. ಹೀಗಾಗಿ ಈ ಬಾರಿಯ ಬಜೆಟ್​ ನಲ್ಲಿ ಬೆಂಗಳೂರಿಗೆ ಆದ್ಯತೆ ನೀಡಿ ಹೆಚ್ಚಿನ ಅನುದಾನ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ  ತೆರಿಗೆ ಹಣವನ್ನ ಹಂಚಿಕೆ ಮಾಡಿತ್ತು. ಅತೀ ಹೆಚ್ಚು ಹೆಚ್ಚು ತೆರಿಗೆ ಕಟ್ಟುತ್ತಿರುವುದು ಕರ್ನಾಟಕ. ಆದರೆ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ಆರೋಪಿಸಿದ್ದರು.   ನಮ್ಮ ತೆರಿಗೆ ನಮ್ಮ ಹಕ್ಕು. ಬಿಜೆಪಿಯ ಇಷ್ಟೊಂದು ಸಂಸದರಿದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ ಏಕೆ ಎಂದು ಕಿಡಿಕಾರಿದ್ದರು.

Key words: Union Budget,  DCM, DK Shivakumar’,  letter, Nirmala Sitharaman

The post ಕೇಂದ್ರ ಬಜೆಟ್​​: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ധനക്ഷാമമില്ല, എല്‍.പി.ജി ഉത്പാദനം 28% വര്‍ധിപ്പിച്ചു; വ്യാജപ്രചരണം വേണ്ട: ഹര്‍ദീപ് സിങ്

ന്യൂദല്‍ഹി: ഇന്ത്യയിലെ ഊര്‍ജ ഇറക്കുമതി സുരക്ഷിതമായി തുടരുകയാണെന്ന് പെട്രോളിയം മന്ത്രി ഹര്‍ദീപ്...

சென்னை ரயில் நிலையங்களில் இந்தி எழுத்துகள் அழிப்பு போராட்டத்தில் மே 17 இயக்கத்தினர்!

தமிழ்நாட்டில் இந்தி திணிப்புக்கு எதிராக தொடர்ந்து குரல் எழுப்பப்பட்டு வருகிறது. அந்தவகையில்...

Lifetime Achievement Award: ‘ది వాల్’ రాహుల్ ద్రావిడ్ కు అరుదైన గౌరవం..

Lifetime Achievement Award: భారత మాజీ క్రికెటర్, మాజీ టీమిండియా కోచ్,...