ಬೆಂಗಳೂರು, ಜನವರಿ 25,2025 (www.jsutkannada.in): ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಈ ಸಂಬಂಧ ಪತ್ರ ಬರೆದಿರುವ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್ ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ. ಬೆಂಗಳೂರಿನ ಪ್ರಮುಖ 17 ಫ್ಲೈ ಓವರ್ಗೆ 12 ಸಾವಿರ ಕೋಟಿ ರೂ ಅಗತ್ಯವಿದೆ. ರಾಜ ಕಾಲುವೆ ನಿರ್ಣಹಣೆ, ವಿಸ್ತರಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಬೆಂಗಳೂರಿನಲ್ಲಿ ಸದ್ಯ ಒಂದುವರೆ ಕೋಟಿ ಜನಸಂಖ್ಯೆ ಇದೆ. ಬಿಸಿನೆಸ್ ಕಾರಿಡಾರ್ ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ. ಹೀಗಾಗಿ ಈ ಬಾರಿಯ ಬಜೆಟ್ ನಲ್ಲಿ ಬೆಂಗಳೂರಿಗೆ ಆದ್ಯತೆ ನೀಡಿ ಹೆಚ್ಚಿನ ಅನುದಾನ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ತೆರಿಗೆ ಹಣವನ್ನ ಹಂಚಿಕೆ ಮಾಡಿತ್ತು. ಅತೀ ಹೆಚ್ಚು ಹೆಚ್ಚು ತೆರಿಗೆ ಕಟ್ಟುತ್ತಿರುವುದು ಕರ್ನಾಟಕ. ಆದರೆ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ಆರೋಪಿಸಿದ್ದರು. ನಮ್ಮ ತೆರಿಗೆ ನಮ್ಮ ಹಕ್ಕು. ಬಿಜೆಪಿಯ ಇಷ್ಟೊಂದು ಸಂಸದರಿದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ ಏಕೆ ಎಂದು ಕಿಡಿಕಾರಿದ್ದರು.
Key words: Union Budget, DCM, DK Shivakumar’, letter, Nirmala Sitharaman
The post ಕೇಂದ್ರ ಬಜೆಟ್: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.