19
February, 2025

A News 365Times Venture

19
Wednesday
February, 2025

A News 365Times Venture

ಮೈಕ್ರೋ ಫೈನಾನ್ಸ್ ಸಭೆ: ಕಂಪನಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್: ಕಠಿಣ ಕ್ರಮದ ಎಚ್ಚರಿಕೆ

Date:

ಬೆಂಗಳೂರು ಜನವರಿ,25,2025 (www.justkannada.in):  ರಾಜ್ಯದಲ್ಲಿ ಮಿತಿ ಮೀರಿರುವ ಮೈಕ್ರೋ ಫೈನಾನ್ಸ್ ಗಳ ಕಿರುಕುಳ,  ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದ್ದು ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು,  ನೋಂದಣಿಯಾಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ತರಾಟೆ ತೆಗೆದುಕೊಂಡಿದ್ದಾರೆ.

ಇಂದು ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಮುಂದೇ ಖಾರವಾಗಿ  ಹತ್ತಾರು ಪ್ರಶ್ನೆಗಳಿನ್ನಾಕಿ ಕ್ಲಾಸ್ ತೆಗೆದುಕೊಂಡರು.

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ? ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂದನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?  ಆರ್ ಬಿಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ  ಕೊಡುತ್ತಿರುವುದು ಏಕೆ?  ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ , ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ಆರ್ ಬಿಐ ಅಧಿಕಾರಿಗಳಿಗೆ ಪ್ರಶ್ನಿಸಿದರು.

ಒಬ್ಬರೇ ಸಾಲಗಾರರು ಬೇರೆ ಬೇರೆ ಗುರುತಿನ ಚೀಟಿ ( ಐಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕಂಪನಿಗಳಿಗೆ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮೈಕ್ರೋ ಕಂಪನಿಯವರು, ಆರ್ ಬಿಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎಂದು ಉತ್ತರಿಸಿದರು.

ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್  ಅವರು ತಕರಾರು ವ್ಯಕ್ತಪಡಿಸಿ,  ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು  ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ‌ ಗುಡುಗಿದರು.

ಈ ವೇಳೆ ಮಾತು ಮುಂದುವರೆಸಿದ ಸಿಎಂ ಸಿದ್ದರಾಮಯ್ಯ, ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.

Key words: Microfinance, meeting, CM Siddaramaiah, strict action

The post ಮೈಕ್ರೋ ಫೈನಾನ್ಸ್ ಸಭೆ: ಕಂಪನಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್: ಕಠಿಣ ಕ್ರಮದ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മഹായുതിയില്‍ ഭിന്നത; ‘വൈ’ കാറ്റഗറി സുരക്ഷയില്‍ ഷിന്‍ഡെക്ക് അതൃപ്തിയെന്ന് റിപ്പോര്‍ട്ട്

മുംബൈ: 2024 നിയമസഭാ തെരഞ്ഞെടുപ്പിന് ശേഷം മഹാരാഷ്ട്രയിലെ ബി.ജെ.പി നേതൃത്വത്തിലുള്ള മഹായുതി...

"தமிழ்நாடு இன்னொரு மொழிப்போரைச் சந்திக்கவும் தயங்காது…" – உதயநிதி எச்சரிக்கை!

மத்திய கல்வித்துறை அமைச்சர் தர்மேந்திர பிரதான், 'தமிழ்நாடு அரசு புதிய கல்விக்...

Vijayawada Metro Project: స్పీడందుకున్న విజయవాడ మెట్రో రైల్ ప్రాజెక్ట్ పనులు..!

Vijayawada Metro Project: విజయవాడ మెట్రో రైలు ప్రాజెక్టుకు సంబంధించి పనులు...