14
February, 2025

A News 365Times Venture

14
Friday
February, 2025

A News 365Times Venture

ಗಣರಾಜ್ಯೋತ್ಸವ: ಎಲ್ಲರ ಕಣ್ಮನ ಸೆಳೆದ ‘ಕಲ್ಲಿನಲ್ಲಿ ಅರಳಿದ ಲಕ್ಕುಂಡಿ ಶಿಲ್ಪಕಲೆ’

Date:

ನವದೆಹಲಿ, ಜನವರಿ, 26,2025 (www.justkannada.in):  ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಿನ್ನೆ ನಡೆದ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪಥಸಂಚಲನದಲ್ಲಿ  ರಾಜ್ಯದ ಸ್ತಬ್ದಚಿತ್ರ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ  ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿತು.

ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು.

ನಿಗದಿತ ರೂಪು ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದ್ದು ವಿಶೇಷ ಎನಿಸಿದೆ. ಅಹಿಂಸಾವಾದಿಯ ನೆಲೆಬೀಡು, ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ  ಮೂಡಿಬಂದಿದ್ದು, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮೆಚ್ಚುಗೆಗೆ  ಪಾತ್ರವಾಯಿತು.

ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸಿತು.  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಉಸ್ತುವಾರಿಯಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಕಲಾ ನಿರ್ದೇಶಕ ಶಶಿಧರ ಅಡಪ ಅವರು ಕಲಾ ನಿರ್ದೇಶನ ಮಾಡಿದ್ದಾರೆ.

ಸಂಗೀತ ನಿರ್ದೇಶಕ ಪ್ರವೀಣ್ ಡಿ.ರಾವ್ ಅವರು ಕನ್ನಡ ಸಾಹಿತ್ಯ ಇರುವ ಸುಮಧುರವಾದ ಸಂಗೀತ ಕರ್ತವ್ಯಪಥದಲ್ಲಿ ನಿನಾದಿಸಿ ಕೇಳುಗರ ಮನಸೂರಗೊಂಡಿತು.  ಮೈಸೂರು,ಬೆಂಗಳೂರು,ಗದಗ ಮತ್ತು ಧಾರವಾಡದಿಂದ ಆಗಮಿಸಿದ 18 ಜನ ಕಲಾವಿದರಿರುವ ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ, ಸಾಂಪ್ರದಾಯಿಕ ಉಡುಪಿನಲ್ಲಿ ಕರ್ತವ್ಯಪಥದಲ್ಲಿ ಕಂಗೊಳಿಸಿದರು. ಇನ್ನುಳಿದ 10 ಜನ ಕಲಾವಿದರು ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಗಮನಸೆಳೆದರು.

ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು,ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ. 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸಿತು.

2022ರ ಇಲಾಖೆಯು ಪ್ರದರ್ಶಿಸಿದ್ದ ʼಸಾಂಪ್ರದಾಯಿಕ ಕಸೂತಿ ತೊಟ್ಟಿಲುʼಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್‍ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್‍ ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ.

Key words: Republic Day,  Karnataka, tablo, Attraction

The post ಗಣರಾಜ್ಯೋತ್ಸವ: ಎಲ್ಲರ ಕಣ್ಮನ ಸೆಳೆದ ‘ಕಲ್ಲಿನಲ್ಲಿ ಅರಳಿದ ಲಕ್ಕುಂಡಿ ಶಿಲ್ಪಕಲೆ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Kishan Reddy: మాజీ సీఎం కేసీఆర్, సీఎం రేవంత్ రెడ్డిలకు కేంద్రమంత్రి సవాల్!

మాజీ సీఎం కేసీఆర్, సీఎం రేవంత్ రెడ్డిలకు కేంద్రమంత్రి కిషన్ రెడ్డి...

ಹೂಡಿಕೆದಾರರ ಸಮಾವೇಶ: ಉತ್ಸಾಹದಿಂದ ಓಡಾಡಿದ ಎಂ ಬಿ ಪಾಟೀಲ

ಬೆಂಗಳೂರು, Feb.12,2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ದಿನವಿಡೀ ಬೃಹತ್...

മലയോര ഹൈവേ; 250 കി.മീ പണി പൂര്‍ത്തിയായി, ഒരു വര്‍ഷത്തിനകം 200 കി.മീ കൂടി; ആദ്യ റീച്ചിന്റെ ഉദ്ഘാടനം നാളെ

തിരുവനന്തപുരം: കാസര്‍ഗോഡ് ജില്ലയിലെ നന്ദാരപ്പടവ് മുതല്‍ തിരുവനന്തപുരം ജില്ലയിലെ പാറശ്ശാലവരെ നീളുന്ന...

`மனைவி கணவரை தவிர்த்து வேறொருவர் மீது காதலும், நெருக்கமும் கொண்டிருப்பது தகாத உறவாகாது'- MP ஹைகோர்ட்

மத்தியப் பிரதேசத்தைச் சேர்ந்த ஒருவர் தன்னுடைய மனைவிக்கு வேறு ஒருவருடன் தொடர்பு...