ಬೆಂಗಳೂರು,ಜನವರಿ,27,2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ.
ಮುಡಾ ಹಗರಣ ಸಂಬಂದ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್ ಜಾರಿ ಮಾಡಿತ್ತು. ಇಡಿ ಸಮನ್ಸ್ ಪ್ರಶ್ನಿಸಿ ಇಬ್ಬರೂ ಹೈಕೋರ್ಟ್ ಮೊರೆ ಹೋಗಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇದೀಗ ಮುಂದಿನ ವಿಚಾರಣೆವರೆಗೆ ಇಡಿ ಸಮನ್ಸ್ ತಡೆ ನೀಡಿದೆ. ವಿಚಾರಣೆಯನ್ನ ಫೆಬ್ರವರಿ 10ಕ್ಕೆ ಮುಂದೂಡಿಕೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: MUDA case, CM’s wife, Minister, Bhairati Suresh, High Court, ED
The post ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.