ಬೆಂಗಳೂರು, ಜನವರಿ, 29,2025 (www.justkannada.in): ಫೆಬ್ರವರಿ 13, 14ರಂದು ಏರ್ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆ ಸುತ್ತಮುತ್ತಲಿನ ಸರ್ಕಾರಿ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದ್ದು, ಏರ್ ಫೋರ್ಸ್ ಸ್ಟೇಷನ್ ಮತ್ತು ಯಲಹಂಕದ ಸುತ್ತಮುತ್ತಲಿನ ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದೆ.
ಫೆಬ್ರವರಿ 13 ಮತ್ತು 14ರಂದು ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಏಷ್ಯಾದ ಅತಿದೊಡ್ಡ ಏರ್ ಶೋ ನಡೆಯಲಿದ್ದು, ಈ ಏರ್ ಶೋ ವೀಕ್ಷಿಸಲು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಆಗಮಿಸುತ್ತಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಪ್ರಥಮ ದರ್ಜೆ, ಖಾಸಗಿ ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳ ತರಗತಿಗಳನ್ನು ರದ್ದುಪಡಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ.
ಬೆಂಗಳೂರು ಏರ್ ಶೋ ‘ಏರೋ ಇಂಡಿಯಾ 2025’ಗೆ ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ, ಏರ್ ಶೋ ವೇಳೆ ಅತ್ತ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಪ್ರಯಾಣಿಕ ವಿಮಾನಗಳ ಹಾರಾಟದಲ್ಲಿ ತುಸು ವ್ಯತ್ಯಯಕ್ಕೂ ಕಾರಣವಾಗಲಿದೆ.
Key words: Air Show, Colleges, holiday, Feb. 13 and 14
The post ಏರ್ ಶೋ ಹಿನ್ನೆಲೆ: ಫೆ.13 ಮತ್ತು 14 ರಂದು ಈ ಭಾಗದ ಕಾಲೇಜುಗಳಿಗೆ ರಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.