19
February, 2025

A News 365Times Venture

19
Wednesday
February, 2025

A News 365Times Venture

ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

Date:

ಮೈಸೂರು, ಜನವರಿ,29,2025 (www.justkannada.in): ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಮೈಸೂರು ಅರಣ್ಯ ಭವನದಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಾಗಿ ಕಾಡಿನಂಚಿನಲ್ಲಿ ಬಿದಿರು ಬೆಳೆಸುವುದು ಮತ್ತು ಅರಣ್ಯದೊಳಗಿನ ನೀರು ಗುಂಡಿಗಳು ಬತ್ತದಂತೆ ಸೌರ ಪಂಪ್ ಸೆಟ್ ಮೂಲಕ ಕೊಳವೆ ಬಾವಿಗಳಿಂದ ನೀರು ಹರಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಬೇಸಿಗೆಯಲ್ಲಿ ಕಾಡ್ಗಿಚ್ಚು ಅರಣ್ಯ ನಾಶಕ್ಕೆ ಕಾರಣವಾಗುತ್ತದೆ. ಹೀಗಾಗಿ ಬರುವ ಬೇಸಿಗೆಯಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮತ್ತು ಕಾಡ್ಗಿಚ್ಚು ಕಾಣಿಸಿಕೊಂಡರೆ ಕೂಡಲೇ ನಂದಿಸಲು ಅಗ್ನಿಶಾಮಕ ಉಪಕರಣಗಳ ಸುಸ್ಥಿತಿಯನ್ನು ಖಾತ್ರಿಪಡಿಸಿಕೊಂಡು, ಸಿಬ್ಬಂದಿಯನ್ನು ಸನ್ನದ್ಧವಾಗಿರುವಂತೆ ನಿರ್ದೇಶಿಸಲು ಸೂಚಿಸಿದರು.

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸಲು ಸೂಚನೆ

ಮೈಸೂರು ನಗರವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಲಾಗಿದ್ದು, ನಗರದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಲೋಟ, ಬ್ಯಾನರ್, ಬಂಟಿಗ್ಸ್ ಸೇರಿದಂತೆ ಯಾವುದೇ ಏಕ ಬಳಕೆ ವಸ್ತು ಮಾರಾಟ, ಸಾಗಾಟ, ದಾಸ್ತಾನಿಗೆ ಅವಕಾಶ ಇಲ್ಲದಂತೆ ನಿಯಮಿತವಾಗಿ ತಪಾಸಣೆ ನಡೆಸಿ ದಂಡ ವಿಧಿಸಲು ಸೂಚನೆ ನೀಡಿದರು.

ಕಲುಷಿತ ನೀರು ಸೇವಿಸಿ ಯಾರೂ ಅಸ್ವಸ್ಥರಾಗಬಾರದು. ಈ ಹಿನ್ನೆಲೆಯಲ್ಲಿ ನಿಯಮಿತವಾಗಿ ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕ್ ಗಳ ನೀರಿನ ಗುಣಮಟ್ಟ ಪರೀಕ್ಷಿಸುವಂತೆ ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮೈಸೂರು ವೃತ್ತದ ಸಿಸಿಎಫ್‌ ಮಾಲತಿ ಪ್ರಿಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜು ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Minister, Ishwar Khandre, proper, maintenance ,elephant, ditches, solar fences

The post ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മഹായുതിയില്‍ ഭിന്നത; ‘വൈ’ കാറ്റഗറി സുരക്ഷയില്‍ ഷിന്‍ഡെക്ക് അതൃപ്തിയെന്ന് റിപ്പോര്‍ട്ട്

മുംബൈ: 2024 നിയമസഭാ തെരഞ്ഞെടുപ്പിന് ശേഷം മഹാരാഷ്ട്രയിലെ ബി.ജെ.പി നേതൃത്വത്തിലുള്ള മഹായുതി...

"தமிழ்நாடு இன்னொரு மொழிப்போரைச் சந்திக்கவும் தயங்காது…" – உதயநிதி எச்சரிக்கை!

மத்திய கல்வித்துறை அமைச்சர் தர்மேந்திர பிரதான், 'தமிழ்நாடு அரசு புதிய கல்விக்...

Vijayawada Metro Project: స్పీడందుకున్న విజయవాడ మెట్రో రైల్ ప్రాజెక్ట్ పనులు..!

Vijayawada Metro Project: విజయవాడ మెట్రో రైలు ప్రాజెక్టుకు సంబంధించి పనులు...