12
March, 2026

A News 365Times Venture

12
Thursday
March, 2026

A News 365Times Venture

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ:  ಆರ್‌.ಅಶೋಕ್ ಆಗ್ರಹ

Date:

ಬೆಂಗಳೂರು, ಫೆಬ್ರವರಿ 1,2925 (www.justkannada.in): ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರ್‌.ಅಶೋಕ ಭೇಟಿ ನೀಡಿದರು.

ನಂತರ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗಿ ಎಂದು ಬೆದರಿಸಿದ್ದಾರೆ. ಅವರಿಗೆ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಅವರಿಗೆ ಕುಡಿಯುವ ನೀರು, ಶೌಚಾಲಯ, ಟೆಂಟ್‌ ಮೊದಲಾದ ಸೌಲಭ್ಯ ನೀಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ. ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,000 ರೂ. ನೀಡಲಾಗುವುದು ಎಂದು ಘೋಷಿಸಲಾಗಿದೆ. ಇದರಂತೆಯೇ ಈಗಲೇ ಸರ್ಕಾರ ಗೌರವಧನ ನೀಡಲಿ ಎಂದು ಆಗ್ರಹಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಭಟಿಸಲು ಅವಕಾಶ ನೀಡದೇ ಇದ್ದಲ್ಲಿ ನಾನೇ ಬಂದು ಪ್ರತಿಭಟನೆಗೆ ಕೂರುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯ ಯಾವ ಇಲಾಖೆಯಲ್ಲೂ ಹುದ್ದೆ ಭರ್ತಿ ಮಾಡಿಲ್ಲ. ಆದರೆ ಅವರ ಜೇಬು ಮಾತ್ರ ಭರ್ತಿಯಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದಂತೆಯೇ ಗೌರವಧನ ಹೆಚ್ಚಳ ಮಾಡಲು ಏಕೆ ಸಾಧ್ಯವಿಲ್ಲ? ಬೇರೆ ರಾಜ್ಯದ ಸಂತ್ರಸ್ತರಿಗೆ ಪರಿಹಾರ ನೀಡಲು ಹಣವಿದೆ. ಆದರೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹಣ ನೀಡುವಾಗ ಖಜಾನೆ ಖಾಲಿಯಾಗಿದೆ. ಇನ್ನು ಮೇಲೆ ಫ್ರೀ ಕೊಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ ಎಂದರು.

ಜನರ ಮೇಲೆ ತೆರಿಗೆ ಹೇರಲಾಗಿದೆ. ಪೆಟ್ರೋಲ್‌-ಡೀಸೆಲ್‌ ದರ ಹೆಚ್ಚಿಸಲಾಗಿದೆ. ಇಷ್ಟೆಲ್ಲ ಆದಾಯ ಬಂದರೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಹೇಗೂ ನಿರ್ಗಮಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರಿಗೆ ಸಹಾಯ ಮಾಡಲಿ ಎಂದರು.

key words: Increase, honorarium, Anganwadi workers, R. Ashok

The post ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ:  ಆರ್‌.ಅಶೋಕ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ...

ഇറാനെ ആക്രമിക്കാനായി ഇറാഖിനെ താവളമാക്കാന്‍ ആരെയും അനുവദിക്കില്ല: ഇറാഖ് പ്രധാനമന്ത്രി

ബാഗ്ദാദ്: ഇറാനെതിരായ ആക്രമണങ്ങള്‍ക്ക് യു.എസ് ഇറാഖിന്റെ വ്യോമാതിര്‍ത്തിയടക്കം ഉപയോഗിക്കുന്നതിനെ എതിര്‍ത്ത് ഇറാഖ്...

Supreme Court: పార్టీ ఫిరాయింపుల కేసులో సుప్రీంకోర్టు సంచలన తీర్పు..

Supreme Court: 10 మంది పార్టీ ఫిరాయింపు కేసు ఎదుర్కొన్న ఎమ్మెల్యేలకు...