14
February, 2025

A News 365Times Venture

14
Friday
February, 2025

A News 365Times Venture

ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಮುಕ್ತ- ಪ್ರಧಾನಿ ಮೋದಿ

Date:

ನವದೆಹಲಿ, ಫೆಬ್ರವರಿ,4,2025 (www.justkannada.in):  ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ 10 ವರ್ಷದಲ್ಲಿ 25 ಕೋಟಿ ಜನರನ್ನು ಬಡತನ ರೇಖೆಯಿಂದ ಹೊರತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ವಂದನಾ ನಿರ್ಣಯಕ್ಕೆ ಉತ್ತರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಹಿಂದೆ 40 ವರ್ಷಗಳ ಕಾಲ ಗರೀಬಿ ಹಠಾವೋ ಎಂದು ಘೋಷಣೆ ಕೂಗಿದವರು ಬಡತನ ನಿರ್ಮೂಲನೆ ಮಾಡಲಿಲ್ಲ. ಆದರೆ, ನಾವು ಸುಳ್ಳಿನ ಘೋಷಣೆ ಮಾಡಿಲ್ಲ. 4 ದಶಕದಲ್ಲಿ ಮಾಡಲಾಗದ ಕೆಲಸವನ್ನು ಒಂದೇ ದಶಕದಲ್ಲಿ ನಾವು ಮಾಡಿದ್ದೇವೆ. ಬಡತನ ನಿವಾರಿಸುವ ಕೆಲಸ ಮಾಡಿದ್ದೇವೆ. ಈವರೆಗೆ ಹೊಸದಾಗಿ 4 ಕೋಟಿ ಮನೆ ನಿರ್ಮಿಸಿಕೊಟ್ಟಿದ್ದೇವೆ ಎಂದು ತಿಳಿಸಿದರು.

ಕಷ್ಟದ ಜೀವನವನ್ನು ನಡೆಸಿದವರಿಗೆ ಮಾತ್ರ ಮನೆ ಪಡೆಯುವುದರ ಮೌಲ್ಯ ಏನೆಂದು ಅರ್ಥವಾಗುತ್ತದೆ. ಹಿಂದಿನ ಕಾಲದಲ್ಲಿ ಮಹಿಳೆಯರು ಶೌಚಾಲಯ ವ್ಯವಸ್ಥೆಯ ಕೊರತೆಯಿಂದ ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದರು. ನಾವು 12 ಕೋಟಿಗೂ ಹೆಚ್ಚು ಶೌಚಾಲಯ ನಿರ್ಮಿಸಿದ್ದೇವೆ. ಈ ಎಲ್ಲ ಸೌಲಭ್ಯಗಳನ್ನು ಹೊಂದಿರುವವರು ಅದರಿಂದ ವಂಚಿತರಾದವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು  ಹೇಳಿದರು.

ನಾವು 2025ನೇ ವರ್ಷದಲ್ಲಿದ್ದೇವೆ. 21ನೇ ಶತಮಾನದ 25% ಭಾಗ ಅಂತ್ಯವಾಗಿದೆ. ಸ್ವಾತಂತ್ರ್ಯದ ಬಳಿಕ ಏನು ಬದಲಾಗಿದೆ ಎಂಬುದನ್ನು ಸಮಯ ನಿರ್ಧಾರ ಮಾಡಲಿದೆ. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಭವಿಷ್ಯದ 25 ವರ್ಷದ ವಿಕಸಿತ್ ಭಾರತದ ಕಲ್ಪನೆಯನ್ನು ತೆರೆದಿಟ್ಟಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣ ವಿಕಸಿತ್ ಭಾರತದ ಸಂಕಲ್ಪವನ್ನು ಗಟ್ಟಿಗೊಳಿಸಿದೆ. ನಮ್ಮ ದೇಶದ ಜನರು 10 ವರ್ಷದಿಂದ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಾರೆ. ಅವರಿಗೆ ಧನ್ಯವಾದ ಎಂದು ಪ್ರಧಾನಿ ಮೋದಿ ಹೇಳಿದರು.

ನಿವಾಸಿಗಳಲ್ಲದಿದ್ದರೂ ಯೋಜನೆ  ಲಾಭ ಪಡೆಯುತ್ತಿದ್ದರು.  10 ಕೋಟಿ ನಕಲಿ ಜನರನ್ನ ತೆಗೆದುಹಾಕಿದ್ದೇವೆ.  ತಪ್ಪು ಕೈಗಳಿಗೆ ಯೋಜನೆ ಹೋಗುವುದನ್ನ ತಪ್ಪಿಸಿದ್ಧೇವೆ.   3 ಲಕ್ಷ ಕೋಟಿ ಹಣ ತಪ್ಪು ಜನರಿಗೆ ಹೋಗುವುದನ್ನ ತಪ್ಪಿಸಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Key words: 25 crore, people, freed, poverty, PM Modi

The post ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಮುಕ್ತ- ಪ್ರಧಾನಿ ಮೋದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೂಡಿಕೆದಾರರ ಸಮಾವೇಶ: ಉತ್ಸಾಹದಿಂದ ಓಡಾಡಿದ ಎಂ ಬಿ ಪಾಟೀಲ

ಬೆಂಗಳೂರು, Feb.12,2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ದಿನವಿಡೀ ಬೃಹತ್...

മലയോര ഹൈവേ; 250 കി.മീ പണി പൂര്‍ത്തിയായി, ഒരു വര്‍ഷത്തിനകം 200 കി.മീ കൂടി; ആദ്യ റീച്ചിന്റെ ഉദ്ഘാടനം നാളെ

തിരുവനന്തപുരം: കാസര്‍ഗോഡ് ജില്ലയിലെ നന്ദാരപ്പടവ് മുതല്‍ തിരുവനന്തപുരം ജില്ലയിലെ പാറശ്ശാലവരെ നീളുന്ന...

`மனைவி கணவரை தவிர்த்து வேறொருவர் மீது காதலும், நெருக்கமும் கொண்டிருப்பது தகாத உறவாகாது'- MP ஹைகோர்ட்

மத்தியப் பிரதேசத்தைச் சேர்ந்த ஒருவர் தன்னுடைய மனைவிக்கு வேறு ஒருவருடன் தொடர்பு...

Lalu Prasad Yadav: “మా బావకు కిడ్నాపర్లలో సంబంధం”.. లాలూ బావమరిది సంచలన ఆరోపణ..

Lalu Prasad Yadav: లాలూ ప్రసాద్ యాదవ్‌పై ఆయన బావమరిది,...