17
August, 2026

A News 365Times Venture

17
Monday
August, 2026

A News 365Times Venture

ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ, ನ್ಯಾಯಾಂಗ ತನಿಖೆ ಮಾಡಿ: ಆರ್‌.ಅಶೋಕ್ ಆಗ್ರಹ

Date:

ಮಂಡ್ಯ, ಫೆಬ್ರವರಿ,6,2025 (www.justkannada.in):  ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ ಭೇಟಿ ನೀಡಿ ಸಾಂತ್ವನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು.

ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರಿಗೆ ಕಣ್ಣಿಲ್ಲ. ಕೊನ್ನಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ, ನವಚೇತನ, ಸೂರ್ಯೋದಯ, ಯುನಿಟಿ, ಪ್ರಗತಿ ಸೇರಿದಂತೆ 24 ಮೈಕ್ರೋ ಫೈನಾನ್ಸ್‌ಗಳು ಈ ಹಳ್ಳಿಗೆ ಬಂದು ವರ್ಷಕ್ಕೆ 12% ರಂತೆ ಸಾಲ ನೀಡಿವೆ. ಒಬ್ಬರಿಗೆ ಒಂಬತ್ತು ಜನರು ಶೂರಿಟಿ ನೀಡಿದ್ದಾರೆ. ಒಬ್ಬರು ಸಾಲ ಮರುಪಾವತಿ ಮಾಡಿಲ್ಲವೆಂದರೆ ಉಳಿದವರು ಹೊಣೆಯಾಗುತ್ತಾರೆ. ಸಾಲ ಕಟ್ಟದೆ ಮಾನ ಹೋದಾಗ ನೊಂದವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಪೊಲೀಸರು ಕೂಡ ಇಲ್ಲಿ ಮೈಕ್ರೋ ಫೈನಾನ್ಸ್‌ಗೆ ಬೆಂಬಲ ನೀಡಿದ್ದಾರೆ. ಮನೆ ವಶಕ್ಕೆ ಪಡೆಯುವ ಸಮಯದಲ್ಲಿ ಪೊಲೀಸರು ಕುಟುಂಬ ಸದಸ್ಯರನ್ನು ಎಳೆದು ಹೊರಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ 60 ಮೈಕ್ರೋ ಫೈನಾನ್ಸ್‌ಗಳಿದ್ದು, ಕೇವಲ 18 ಮಾತ್ರ ಅಧಿಕೃತವಾಗಿವೆ. ಉಳಿದವುಗಳಲ್ಲಿ ರೌಡಿಗಳಿದ್ದಾರೆ. ತಹಶೀಲ್ದಾರ್‌ ಹಾಗೂ ಪೊಲೀಸರು ಎಲ್ಲ ಹಳ್ಳಿಗೂ ಹೋಗಿ ಕ್ರಮ ಕೈಗೊಳ್ಳಬೇಕಿತ್ತು. ಈ ಸಾವುಗಳಿಗೆ ನ್ಯಾಯ ನೀಡಲು ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು. ಅನಧಿಕೃತ ಮೈಕ್ರೋ ಫೈನಾನ್ಸ್‌ಗಳನ್ನು ಪತ್ತೆ ಮಾಡಿ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

Key words: justice, died, microfinance, R. Ashok

The post ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ, ನ್ಯಾಯಾಂಗ ತನಿಖೆ ಮಾಡಿ: ಆರ್‌.ಅಶೋಕ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബുദ്ധിയുള്ളവരായിരിക്കുക, അന്ധഭക്തരാവാതിരിക്കുക; പ്രധാനമന്ത്രിയുടെ ദിമാഗി നക്സൽ പരാമർശത്തിൽ പ്രകാശ് രാജ്

ബെംഗളൂരു: പ്രധാനമന്ത്രി നരേന്ദ്ര മോദിയുടെ ‘ ദിമാഗി നക്സലുകൾ (ബുദ്ധിയുള്ള നക്സലുകളായവർ)’...

`அதுக்கு எந்த ரியாக்ஷனும் கொடுக்காம… இதுக்கு கைது பண்ணிட்டாங்க!' – உதயநிதி ஸ்டாலின்

அண்ணா அறிவாலயத்தில் வடக்கு மண்டல வழக்கறிஞர்கள் அணி ஆலோசனைக் கூட்டம் இன்று...

West Bengal: కాంగ్రెస్ నేత, కుమారుడి కాల్చివేత.. ఇంటికి వెళ్తున్న సమయంలో దారుణం..

West Bengal: పశ్చిమ బెంగాల్‌లోని నదియా జిల్లాలో కాంగ్రెస్ నేత, ఆయన...

മോദിയുടെ ദിമാഗി നക്സൽ പരാമർശത്തിന് പിന്നാലെ ‘ദിമാഗി നക്സൽ ജനതാ പാർട്ടി’ എന്ന പേരിൽ സോഷ്യൽ മീഡിയ അക്കൗണ്ടുകൾ

ന്യൂദൽഹി: പ്രധാനമന്ത്രി നരേന്ദ്ര മോദി നടത്തിയ ‘ദിമാഗി നക്സൽ (ബുദ്ധിയുള്ള നക്സൽ)’...