15
March, 2026

A News 365Times Venture

15
Sunday
March, 2026

A News 365Times Venture

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಬಸ್ ಕಂಡಕ್ಟರ್ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗರೆಡ್ಡಿ

Date:

ಬೆಳಗಾವಿ,ಫೆಬ್ರವರಿ,24,2025 (www.justkannada.in):  ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಹಲ್ಲೆಗೊಳಗಾಗಿದ್ದ ಬಸ್ ಕಂಡಕ್ಟರ್ ಮಹದೇವಪ್ಪ ಅವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಇಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಬಸ್‌ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಂಡಕ್ಟರ್ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಲಾಗಿದೆ.  ನಾವೆಲ್ಲ ಕಂಡಕ್ಟರ್ ಮಹದೇವಪ್ಪ ಪರ ಇದ್ದೇವೆ.  ಹಲ್ಲೆ ಮಾಡಿದವರ ವಿರುದ್ದ ಗೂಂಡಾಕಾಯ್ದೆ ಹಾಕಬೇಕು ಎಂದರು.

‘ಹಲ್ಲೆಗೆ ಒಳಗಾಗಿರುವ ಮಹಾದೇವ ಅವರ ಆರೋಗ್ಯ ಸ್ಥಿರವಾಗಿದೆ. ಎರಡು ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ತಮ್ಮ ಮೇಲೆ ಪೋಕ್ಸೊ ಪ್ರಕರಣ ದಾಖಲಾದ ಕಾರಣ ಮಹಾದೇವ ಆತಂಕಗೊಂಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಳ್ಳುವಾಗ ಪೊಲೀಸರು ಸಾಮಾನ್ಯ ಜ್ಞಾನವನ್ನೂ ಬಳಸಿಲ್ಲ. ಈ ಪ್ರಕರಣ ಹಿಂದಕ್ಕೆ ಪಡೆಯುವ ಹಾಗೂ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ಜರುಗಿಸುವ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ ಅವರೊಂದಿಗೆ ಮಾತನಾಡುತ್ತೇನೆ’ ಎಂದು ತಿಳಿಸಿದರು.

‘ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಸ್ಥಗಿತಗೊಂಡ ಕಾರಣ, ಜನರು ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ಸಾರಿಗೆ ನಿಗಮಗಳಿಗೂ ನಷ್ಟವಾಗುತ್ತದೆ. ಮಹಾರಾಷ್ಟ್ರದಲ್ಲಿ ನಮ್ಮ ಬಸ್ ಗೆ ಹಾನಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಲ್ಲಿನ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ರಾಮಲಿಂಗರೆಡ್ಡಿ ತಿಳಿಸಿದರು.

Key words: Minister, Ramalingareddy, health, bus conductor, Belgaum

The post ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಬಸ್ ಕಂಡಕ್ಟರ್ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು...

ഭരണാഘടനാ തടസ്സം; യുദ്ധകപ്പലുകള്‍ അയക്കാനാവില്ല; ട്രംപിനെ തള്ളി ജപ്പാന്‍

വാഷിങ്ടണ്‍: ഹോര്‍മുസ് കടലിടുക്കിന്റെ സുരക്ഷ ഉറപ്പാക്കാന്‍ ലോകരാഷ്ട്രങ്ങള്‍ സ്വന്തം യുദ്ധ കപ്പലുകള്‍...

''காங்கிரஸுக்குக் கூடுதல் தொகுதிகள் ஒதுக்கியதை தோழமைக்கட்சிகள் விவாதமாக்காதீர்கள்"- செல்வப்பெருந்தகை

இன்று சட்டமன்றத் தேர்தலுக்கான தேதி அறிவிக்கப்படும் எனத் தேர்தல் ஆணையம் அறிவித்திருக்கிறது....

LPG Crisis: వారికి కేంద్రం షాక్.. “నో బుకింగ్, సిలిండర్ సరెండల్ చేయాలి “..

LPG Crisis: ఇరాన్ యుద్ధం దేశంలో వంటగ్యాస్ (LPG) ఆందోళన్ని...