15
March, 2026

A News 365Times Venture

15
Sunday
March, 2026

A News 365Times Venture

ಬೆಂಗಳೂರಿನ ಇಡ್ಲಿ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಆಹಾರ ಇಲಾಖೆ ಪರೀಕ್ಷೆಯಲ್ಲಿ ಆಘಾತಕಾರಿ ಅಂಶ ಬಹಿರಂಗ

Date:

ಬೆಂಗಳೂರು, ಫೆಬ್ರವರಿ 27,2025 (www.justkannada.in): ಬೆಂಗಳೂರಿನ ಇಡ್ಲಿ ಪ್ರಿಯರಿಗೆ ಆಹಾರ ಇಲಾಖೆ ಶಾಕಿಂಗ್ ಸುದ್ದಿಯೊಂದನ್ನ ನೀಡಿದೆ. ಬೆಂಗಳೂರಿನ ಅನೇಕ ಹೋಟೆಲ್‌ಗಳಲ್ಲಿ ತಯಾರಾಗುವ ಇಡ್ಲಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಿಂದ ದೃಢಪಟ್ಟಿದೆ.

ಹೌದು ಬೆಂಗಳೂರಿನ ವಿವಿಧೆಡೆಗಳಿಂದ ಇಡ್ಲಿ ಮಾದರಿಗಳನ್ನು ಪಡೆದಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದ್ದು,  ಇದೀಗ ಪ್ರಯೋಗಾಲಯ ವರದಿಯಲ್ಲಿ  35 ಕ್ಕೂ ಹೆಚ್ಚು ಇಡ್ಲಿ ಮಾದರಿಗಳು ಅಸುರಕ್ಷಿತ ಎಂಬ ಶಾಕಿಂಗ್ ವಿಚಾರ  ಬಹಿರಂಗವಾಗಿದೆ.

ಬೆಂಗಳೂರಿನ ಹಲವಡೆ ಇತ್ತೀಚೆಗೆ ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್‌ ಬಳಕೆ ಮಾಡಲಾಗುತ್ತಿದೆ. ಇಡ್ಲಿ ಮಾಡುವಾಗ ಮಾತ್ರವಲ್ಲದೆ ಆಹಾರವನ್ನು ಬಡಿಸುವಾಗ ಮತ್ತು ಪ್ಯಾಕ್ ಮಾಡುವಾಗಲೂ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಯು ಶಾಖಕ್ಕೆ ಒಡ್ಡಿಕೊಂಡು ಹಾನಿಕಾರಕ ವಸ್ತುವನ್ನು ಹೊರಸೂಸುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು.

ತಜ್ಞರ ಎಚ್ಚರಿಕೆ ಬೆನ್ನಲ್ಲೇ ಆಹಾರ ಇಲಾಖೆ ಬೆಂಗಳೂರಿನ ಹಲವಡೆಯಿಂದ ಇಡ್ಲಿ ಮಾದರಿಗಳನ್ನು ಸಂಗ್ರಹ ಮಾಡಿತ್ತು. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಹೋಟೆಲ್ ಹಾಗೂ ತಿಂಡಿಗಳ ಅಂಗಡಿಗಳಿಂದ 500ಕ್ಕೂ ಹೆಚ್ಚು ಇಡ್ಲಿ ಸ್ಯಾಂಪಲ್ಸ್ ಸಂಗ್ರಹ ಮಾಡಿದ್ದು, ಇವುಗಳಲ್ಲಿ 35 ಕ್ಕೂ ಹೆಚ್ಚು ಇಡ್ಲಿ ಸ್ಯಾಂಪಲ್ಸ್ ಅಸುರಕ್ಷಿತ ಎಂಬ ವರದಿ ಬಂದಿದೆ. ಇನ್ನೂ ನೂರಾರು ಇಡ್ಲಿ ಸ್ಯಾಂಪಲ್ಸ್ ವರದಿಗೆ ಕಾಯಲಾಗುತ್ತಿದೆ. ಹೀಗಾಗಿ ಇನ್ಮುಂದೆ ಇಡ್ಲಿ ಸೇವಿಸುವ ಗ್ರಾಹಕರು ಎಚ್ಚರ ವಹಿಸಬೇಕಾಗುತ್ತದೆ.

Key words: Idli, Bengaluru, Shocking news, Food Department, test

The post ಬೆಂಗಳೂರಿನ ಇಡ್ಲಿ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಆಹಾರ ಇಲಾಖೆ ಪರೀಕ್ಷೆಯಲ್ಲಿ ಆಘಾತಕಾರಿ ಅಂಶ ಬಹಿರಂಗ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Ustaad Bhagat Singh: ‘సినిమా లేట్ అవ్వడానికి కారణం నేనే’: డైరెక్టర్ హరీశ్ శంకర్..

పవన్ కళ్యాణ్ హీరోగా, మాస్ దర్శకుడు హరీష్ శంకర్ దర్శకత్వంలో ఎంతో...

ಎಲ್ ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್, 14,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ...

നൂറിലധികം സീറ്റുമായി യു.ഡി.എഫ് തിരിച്ചുവരും; കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രം: വി.ഡി. സതീശന്‍

പറവൂര്‍: കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രമേയുള്ളുവെന്ന് പ്രതിപക്ഷ...

Assembly Elections: தமிழ்நாடு உள்ளிட்ட 5 மாநில தேர்தல் தேதியை அறிவித்த தேர்தல் ஆணையம்!- முழு விவரம்

தேர்தல் நெருங்குவதால் அரசியல் களம் சூடு பிடித்திருக்கிறது. அரசியல் கட்சிகளும் கூட்டணிகளை...