24
September, 2026

A News 365Times Venture

24
Thursday
September, 2026

A News 365Times Venture

  “ಎ” ಶ್ರೇಣಿ ಪಡೆದ ರಾಜ್ಯದ ಮೊದಲ ಎಸ್ಕಾಂ ಎಂಬ ಹೆಗ್ಗಳಿಕೆಗೆ ಪಾತ್ರವಾದ “ ಸೆಸ್ಕ್‌ “

Date:

 

ಮೈಸೂರು, ಫೆ.27, 2025: ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರ ಜತೆಗೆ ವಿದ್ಯುತ್‌ ಉಳಿತಾಯ, ಫೀಡರ್‌ ನಿರ್ವಹಣೆ ಹೀಗೆ ಹಲವು ವಿಭಾಗಗಳಲ್ಲಿ ಬದ್ಧತೆಯೊಂದಿಗೆ ಕಾರ್ಯನಿರ್ವಹಣೆ ಮಾಡಿರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ವು ಪವರ್ ಫೈನಾನ್ಸ್ ಕಾರ್ಪೊರೇಷನ್ (PFC) ಆಫ್ ಇಂಡಿಯಾ ನೀಡುವ ರೇಟಿಂಗ್‌ನಲ್ಲಿ “ಎ” ಶ್ರೇಣಿಗೆ ಉನ್ನತೀಕರಣಗೊಂಡಿದೆ.

ನಗರದ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ  ನಿಗಮದ ಅಧ್ಯಕ್ಷರಾದ ರಮೇಶ್‌ ಬಂಡಿಸಿದ್ದೇಗೌಡ ಅವರು, “ಸೆಸ್ಕ್ ನ ನಿರಂತರ ಪರಿಶ್ರಮ, ಉತ್ಕೃಷ್ಟತೆಯ ಬದ್ಧತೆಯಿಂದ ರಾಷ್ಟ್ರೀಯ ಮಟ್ಟದಲ್ಲಿ ಕಂಪನಿಗಳ ಶ್ರೇಯಾಂಕ (Ranking) ನೀಡುವ ಪವರ್‌ ಫೈನಾನ್ಸ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ ಅವರು ನೀಡುವ ರೇಟಿಂಗ್‌ನಲ್ಲಿ ಸೆಸ್ಕ್ “ಬಿ” ಶ್ರೇಣಿಯಿಂದ “ಎ” ಶ್ರೇಣಿಗೆ ಉನ್ನತೀಕರಣಗೊಂಡಿದೆ. ಆ ಮೂಲಕ “ಎ” ಶ್ರೇಯಾಂಕ ಪಡೆದಿರುವ ರಾಜ್ಯದ ಏಕೈಕ ಎಸ್ಕಾಂ ನಮ್ಮದು ಎಂದು ಹೆಮ್ಮೆಯಿಂದ ಘೋಷಿಸುತ್ತೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡುವ ಮೂಲಕ “ಎ- ಪ್ಲಸ್” ಶ್ರೇಣಿ ಪಡೆಯುವ ಗುರಿ ಇದೆ’’ ಎಂದು ತಿಳಿಸಿದರು.

“ಸೆಸ್ಕ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಉತ್ತಮ ಕಾರ್ಯನಿರ್ವಹಣೆಯಿಂದಾಗಿ ಈ ಶ್ರೇಯಾಂಕ ಪಡೆಯಲು ಸಾಧ್ಯವಾಗಿದೆ. ದೇಶದ ಎಲ್ಲಾ ಎಸ್ಕಾಂಗಳ ಸೇವೆಯನ್ನು ಪವರ್ ಫೈನಾನ್ಸ್ ಕಾರ್ಪೋರೇಶನ್ ಆಫ್‌ ಇಂಡಿಯಾ ಪ್ರತಿ ವರ್ಷವೂ ಗಮನಿಸಿ ಶ್ರೇಯಾಂಕನೀಡುತ್ತದೆ. ಸೆಸ್ಕ್ ಉತ್ತಮ ಕಾರ್ಯನಿರ್ವಹಣೆ ಮಾಡಿರುವ ಹಿನ್ನಲೆಯಲ್ಲಿ ಬಿ ಗ್ರೇಡ್ ನಿಂದ ಎ ಗ್ರೇಡ್‌ಗೆ ಉನ್ನತೀಕರಣಗೊಂಡಿದೆ. ಅಲ್ಲದೇ ರಾಷ್ಟ್ರಮಟ್ಟದಲ್ಲಿ 16ನೇ ಶ್ರೇಯಾಂಕವನ್ನು ಸೆಸ್ಕ್‌ ಪಡೆದಿದ್ದು, ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಇದರಿಂದ ಸೆಸ್ಕ್‌ಗೆ ಕೇಂದ್ರ ಮತ್ತು ರಾಜ್ಯದಿಂದ ಅಗತ್ಯ ಅನುದಾನ ಸಿಗುವುದರೊಂದಿಗೆ ಬ್ಯಾಂಕ್ ನಿಂದ ಸಾಲ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ’’ ಎಂದರು.

ವಿದ್ಯುತ್‌ ನಷ್ಟದಲ್ಲಿ ಇಳಿಕೆ:

“ಸಮರ್ಪಕ ಹಾಗೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಣೆ ಪರಿಣಾಮ ವಿದ್ಯುತ್‌ ನಷ್ಟ ತಡೆಯುವಲ್ಲಿಯೂ ಸೆಸ್ಕ್‌ ಪ್ರಗತಿ ಸಾಧಿಸಿದೆ. ಕಳೆದ ಬಾರಿ 10.3ರಷ್ಟಿದ್ದ ವಿದ್ಯುತ್‌ ನಷ್ಟದ ಪ್ರಮಾಣ ಇದೀಗ 9.03ಕ್ಕೆ ಇಳಿಕೆಯಾಗಿದೆ. ಮುಂದಿನ ದಿನಗಳಲ್ಲಿ ಇದನ್ನು 7ರಷ್ಟಕ್ಕೆ ಇಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು. ಅಲ್ಲದೆ, ರೈತರಿಗೆ ನಿರಂತರ ವಿದ್ಯುತ್‌ ಪೂರೈಕೆಗೆ ಆದ್ಯತೆ ನೀಡಲಾಗಿದ್ದು, ಟ್ರಾನ್ಸ್‌ಫಾರ್ಮರ್‌ಗಳ ತ್ವರಿತ ದುರಸ್ತಿ ಮಾಡುವ ನಿಟ್ಟಿನಲ್ಲೂ ಕ್ರಮ ಕೈಗೊಳ್ಳಲಾಗಿದೆ. 23,061 ಅಪಾಯಕಾರಿ ಸ್ಥಳ ಗುರುತಿಸಿ ಸರಿಪಡಿಸಲಾಗಿದೆ. ಕಂಟ್ರೋಲ್ ರೂಂ ನಂಬರ್ ಗಳ ಮೂಲಕ ಜನರ ಸಮಸ್ಯೆಗೆ ಶೀಘ್ರ ಸ್ಪಂದಿಸುವ ಕೆಲಸ ನಿರಂತರವಾಗಿ ಮಾಡಲಾಗುತ್ತಿದೆ” ಎಂದರು.

ಸೋಲಾರ್ ವಿದ್ಯುತ್ ಉತ್ಪಾದನೆಗೆ ಆದ್ಯತೆ:

ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಶೀಲಾ ಅವರು ಮಾತನಾಡಿ, “ಸೆಸ್ಕ್ ವತಿಯಿಂದ ಪಿಎಂ ಕುಸುಮ್-ಸಿ ಯೋಜನೆಯಡಿ 500 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ ಯೋಜನೆ ರೂಪಿಸಲಾಗಿದ್ದು, ಅದಕ್ಕಾಗಿ 110 ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ರಾಜ್ಯ ಸರ್ಕಾರದ ನೆರವಿನಿಂದ ಅಗತ್ಯ ಸರಕಾರಿ ಭೂಮಿ ಸಿಕ್ಕಿದ್ದು, ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿ ಯೋಜನೆ ಅನುಷ್ಠಾನವಾಗುತ್ತಿದೆ. ಈಗಾಗಲೇ ಚಾಮರಾಜ ನಗರದಲ್ಲಿ   ಯೋಜನೆ ಅನುಷ್ಠಾನವಾಗುತ್ತಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ”, ಎಂದು ತಿಳಿಸಿದರು.

“ಕುಸುಮ್- ಬಿ ಮತ್ತು ಕುಸುಮ್- ಸಿ ಸೇರಿದಂತೆ ಸೋಲಾರ್ ವಿದ್ಯುತ್ ಯೋಜನೆಯಿಂದ ಶೇ.25ರಷ್ಟು ವಿದ್ಯುತ್ ಖರೀದಿ ಕಡಿಮೆಯಾಗಲಿದ್ದು, ಸೆಸ್ಕ್ ಗೆ ಆಗಲಿರುವ ಆರ್ಥಿಕ ಹೊರೆ ಕಡಿಮೆಯಾಗಲಿದೆ. ಪ್ರಧಾನ ಮಂತ್ರಿ ಸೌರಗೃಹ ಯೋಜನೆಯಡಿ 752 ಮನೆಗಳಿಗೆ ಸೋಲಾರ್ ಸ್ಥಾವರಗಳನ್ನು ಸ್ಥಾಪಿಸಲಾಗಿದೆ. ಜತೆಗೆ ಪ್ರಧಾನ ಮಂತ್ರಿ ಜನ್ ಮನ್ ಯೋಜನೆಡಯಿಡಿಗಳ ಹಾಡಿಗಳ  1,085 ಆದಿವಾಸಿ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ” ಎಂದು ಹೇಳಿದರು.

ಇದೇ ವೇಳೆ,  ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ ನಾಳೆ (ಫೆ.28) ಸೇವೆಯಿಂದ ನಿವೃತ್ತಿ ಹೊಂದುತ್ತಿದ್ದು, ಮಾಧ್ಯಮ ಮಿತ್ರರಿಗೆ ಧನ್ಯವಾದ ತಿಳಿಸಿದರು. ಸೆಸ್ಕ್‌ ನ ಸೂಪರಿಂಡೆಂಟ್‌ ಇಂಜಿನೀಯರ್‌ ಮುನಿಗೋಪಾಲ್‌ ರಾಜು ಉಪಸ್ಥಿತರಿದ್ದರು.

key words:   CESC,  escom, “A” grade

CESC becomes first escom in the state to get “A” grade

The post   “ಎ” ಶ್ರೇಣಿ ಪಡೆದ ರಾಜ್ಯದ ಮೊದಲ ಎಸ್ಕಾಂ ಎಂಬ ಹೆಗ್ಗಳಿಕೆಗೆ ಪಾತ್ರವಾದ “ ಸೆಸ್ಕ್‌ “ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഓസ്‌ട്രേലിയന്‍ സര്‍ക്കാര്‍ ഹെല്‍ത്ത് കെയര്‍ ഡാറ്റാബേസ് ഹാക്ക് ചെയ്ത് ഓപ്പണ്‍ എ.ഐ ഏജന്റ്: അറിഞ്ഞത് മാസങ്ങള്‍ക്കുശേഷം

ന്യൂയോര്‍ക്ക്: ഓസ്‌ട്രേലിയയുടെ ആരോഗ്യവകുപ്പിന്റെ വെബ്‌സൈറ്റ് ഹാക്ക് ചെയ്ത് സ്വകാര്യഡാറ്റയിലേക്ക് നുഴഞ്ഞുകയറി ഓപ്പണ്‍...

தேர்தல் ஆணையம்: “இதனால்தான் இந்த விவகாரம் சர்ச்சையாகியுள்ளது..!" – முன்னாள் ஆணையர் சொல்வதென்ன?

தேர்தல் ஆணையத்தில் பெரும்பான்மை உறுப்பினர்களின் ஆதரவோ அல்லது ஒருமித்த கருத்தோ இன்றி...

AP Liquor Shops: లిక్కర్ షాపులపై కీలక నిర్ణయం.. ఇక రెన్యువల్ గడువు పొడిగింపు లేదు..!

AP Liquor Shops: ఆంధ్రప్రదేశ్‌లో 2026–27 ఎక్సైజ్ సంవత్సరానికి ఏ4 మద్యం...

കുടുംബ കലഹങ്ങള്‍ വേണ്ട; എ.ഐ ക്യാമറ നിയമ ലംഘന നോട്ടീസുകളില്‍ ചിത്രങ്ങള്‍ ഒഴിവാക്കാന്‍ എം.വി.ഡി

തിരുവനന്തപുരം: മോട്ടോര്‍ വാഹന വകുപ്പിന്റെ എ.ഐ ക്യാമറകള്‍ വഴിയുള്ള നിയമലംഘനങ്ങള്‍ പരിശോധിക്കുന്നതിനുള്ള...