25
May, 2026

A News 365Times Venture

25
Monday
May, 2026

A News 365Times Venture

ಸರ್ಕಾರದಿಂದ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ: ಜಿಎಸ್‌ ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿ- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Date:

ಬೆಂಗಳೂರು,ಮಾರ್ಚ್,3,2025 (www.justkannada.in): ಸರ್ಕಾರದಿಂದ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿದೆ. ಜಿಎಸ್‌ ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿಯಲ್ಲಿದೆ ಎಂದು  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನುಡಿದರು.

ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ. ಸರ್ಕಾರದ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂಬ ಟೀಕೆ ವ್ಯಕ್ತವಾಗಿತ್ತು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿಯಲ್ಲಿದೆ ಎಂದರು.

ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ರಾಜ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ಅಭಿವೃದ್ದಿಯತ್ತ ಸರ್ಕಾರ ದಾಪುಗಾಲಿಟ್ಟಿದೆ. ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಣ್ಣಿಸಿದರು.

Key words: Government, development, Session, Governor, Thawar Chand Gehlot

The post ಸರ್ಕಾರದಿಂದ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ: ಜಿಎಸ್‌ ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿ- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മധു കൊലപാതകം: 12 പ്രതികളുടെ ശിക്ഷ ജീവപര്യന്തമാക്കി വര്‍ധിപ്പിച്ചു

കൊച്ചി: അട്ടപ്പാടിയില്‍, ആള്‍ക്കൂട്ട ആക്രമണത്തില്‍ ആദിവാസി യുവാവ് മധു കൊല്ലപ്പെട്ട കേസില്‍...

மேகதாது: `தமிழர்களுக்கு எந்த வகையிலும் துரோகம் இழைக்கக் கூடாது என்பதில்…' – அமைச்சர் பி.விஸ்வநாதன்

தமிழ்நாட்டின் புதிய உயர்கல்வித்துறை அமைச்சராகப் பொறுப்பேற்றுள்ள காங்கிரஸ் கட்சியின் பி.விஸ்வநாதன், மதுரை...

NEET UG 2026 Fee Refund: నీట్ యూజీ పరీక్ష ఫీజు రిఫండ్ ప్రక్రియ ప్రారంభం.. చివరి తేదీ మే 27..

వైద్య విద్యా కోర్సుల్లో ప్రవేశాల కోసం దేశవ్యాప్తంగా నిర్వహించే ‘నీట్ యూజీ...

ಇಂಧನ ಬೆಲೆ ಏರಿಕೆ: ಪ್ರಧಾನಿ ಮೋದಿಯಿಂಧ ಜನಸಾಮಾನ್ಯರ ಲೂಟಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ, 25,2026 (www.justkannada.in):  ಮೋದಿಯವರು ಪ್ರಧಾನಿ ಆದ ಬಳಿಕ...