11
May, 2026

A News 365Times Venture

11
Monday
May, 2026

A News 365Times Venture

ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟ ಕಾಪಾಡಿ- ಸಚಿವ ಕೆ.ಹೆಚ್. ಮುನಿಯಪ್ಪ ಸೂಚನೆ

Date:

ಬೆಂಗಳೂರು,ಮಾರ್ಚ್,03,2025(www.justkannada.in): ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟವನ್ನು  ಕಾಪಾಡಬೇಕು ಲೋಪವೆಸಗಿದ್ದಲ್ಲಿ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ  ತೆಗೆದುಕೊಳ್ಳಲಾಗುವುದು ಎಂದು ಆಹಾರ ಸಚಿವ  ಕೆಹೆಚ್. ಮುನಿಯಪ್ಪ ಎಚ್ಚರಿಕೆ ನೀಡಿದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ ರವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆಸ್ಸಿ ಮುಖ್ಯಸ್ಥರೊಂದಿಗೆ  ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ(MSP) ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು  ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ MSPಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅವರ ಮೇಲೆ ಕ್ರಮ ತೆಗೆದುಕೊಳ್ಳುಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳನ್ನು ಹಾಗೂ ಜೋಳ ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳ 3371 ಹಾಗೂ ಮಾಲದಂಡಿ  ಜೋಳ 3421 ಭತ್ತಕ್ಕೆ ಸಾಮಾನ್ಯವಾಗಿ ಪ್ರತಿ ಕ್ವಿಂಟಾಲ್ 2300. ಗ್ರೇಡ್ ಎ 2320 ದರ ನಿಗದಿಯಾಗಿದ್ದು  ಈ ದರದಲ್ಲಿ  ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂಧಾಯ ಮಾಡಬೇಕು ಎಂದರು.

ಜಿಲ್ಲಾಧಿಕಾರಿಗಳು ಖರೀದೀ ಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾನದ ವ್ಯವಸ್ಥೆಯನ್ನು ಕಲ್ಪಿಸಬೇಕು  ಏಕೆಂದರೆ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲಿರಿವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದರು.

ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ‌ ಅಕ್ಕಿ ವಿತರಿಸಲು ತೀರ್ಮಾನಿಸಿದ್ದು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.

ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಬೇಕು. ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು  ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತ್ತು ಮಾಡಬೇಕು ಎಂದು ಜಿಲ್ಲಾಧಿಕಾರಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್,ಆಯುಕ್ತರಾದ ವಾಸಿ ರೆಡ್ಡಿ ವಿಜಯಜೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್,ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ  ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ ಎಸ್ ಎನ್ ಬಾಬು. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Maintain, quality, food, farmers ,Minister, KH. Muniyappa, instructs

The post ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟ ಕಾಪಾಡಿ- ಸಚಿವ ಕೆ.ಹೆಚ್. ಮುನಿಯಪ್ಪ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ധന ഉപയോഗം കുറയ്ക്കണം, വർക്ക് ഫ്രം ഹോമിന് മുൻഗണന നൽകണം; ആഗോള പ്രതിസന്ധിക്കിടയിൽ ജനങ്ങളോട് മോദി

ഹൈദരാബാദ്: പശ്ചിമേഷ്യൻ യുദ്ധത്തെത്തുടർന്നുണ്ടായ ആഗോള ഇന്ധന പ്രതിസന്ധിയുടെ പശ്ചാത്തലത്തിൽ, വിഭവങ്ങൾ മിതമായി...

`அப்பாவை அரசியலுக்கு வராதனு சொன்னார் எம்.ஜி.ஆர்; விஜய் சார் என்னை அரசியலுக்கு வரவச்சிட்டார்'- தினேஷ்

தமிழ்நாட்டின் புதிய முதலமைச்சராக தவெக தலைவர் விஜய் பதவி ஏற்றுள்ள நிலையில்,...

PM Modi: మే 15 లోపు పెట్రోల్, డీజిల్ ధరలు పెరుగొచ్చా.. మోడీ వ్యాఖ్యల ఆంతర్యం ఏమిటి.?

PM Modi: తెలంగాణ నుంచి దేశ ప్రజలకు ప్రధాని నరేంద్రమోడీ ఆదివారం...

നാഗ്പൂരിലെ നിര്‍ദേശം സ്വീകരിച്ച് പ്രവര്‍ത്തിക്കുന്ന പാര്‍ട്ടിയല്ല കോണ്‍ഗ്രസ്; പ്രധാനമന്ത്രിയുടെ പരിഹാസത്തിന് ചെന്നിത്തലയുടെ മറുപടി

തിരുവനന്തപുരം: കേരളത്തില്‍ മുഖ്യമന്ത്രിയെ നിശ്ചയിക്കുന്നതിലെ കാലതാമസത്തെ പരിഹസിച്ച പ്രധാനമന്ത്രി നരേന്ദ്ര മോദിക്ക്...