14
May, 2026

A News 365Times Venture

14
Thursday
May, 2026

A News 365Times Venture

ರಾಷ್ಟ್ರೀಯ ಲೋಕ್ ಅದಾಲತ್‌  : ಒಟ್ಟು 7,268 ಬಾಕಿ  ಪ್ರಕರಣಗಳು ಇತ್ಯರ್ಥ.

Date:

 

ಮೈಸೂರು, ಮಾ.08,2025:  ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ  ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಇಂದು ರಾಷ್ಟ್ರೀಯ ಲೋಕ್ ಅದಾಲತ್‌  ಹಮ್ಮಿಕೊಳ್ಳಲಾಗಿತ್ತು.

ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,22,125 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 61,193 ಸಿವಿಲ್ ಪ್ರಕರಣಗಳು ಹಾಗೂ 60,932 ಕ್ರಿಮಿನಲ್ ಪ್ರಕರಣಗಳಿದ್ದು, ಪ್ರಸ್ತುತ ಸದರಿ ಪ್ರಕರಣಗಳಲ್ಲಿ 37,816 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳಿದ್ದು, ಅವುಗಳ ಪೈಕಿ 21,646 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ರಾಜಿ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ (ನ್ಯಾಯಾಲಯದಲ್ಲಿ ಬಾಕಿ ಇರುವ) 7,268 ಪ್ರಕರಣಗಳನ್ನು ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ.

ಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 41 ದಂಪತಿಗಳು ತಮ್ಮ ಮಧ್ಯದ ವಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾದರು.

ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟಾರೆಯಾಗಿ 7,268 ನ್ಯಾಯಾಲಯದಲ್ಲಿ ಬಾಕಿಯಿದ್ದ ಪ್ರಕರಣಗಳು ತೀರ್ಮಾನವಾಗಿರುತ್ತದೆ. ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ಮೂಲಕ ಒಟ್ಟು ರೂ.49,66,29,267/-ಗಳು  ಇತ್ಯರ್ಥವಾಗಿರುತ್ತದೆ. ಈ ಯಶಸ್ಸಿಗೆ ಸಹಕರಿಸಿ ಎಲ್ಲಾ ವಕೀಲರು  ಹಾಗೂ ಕಕ್ಷಿಗಾರರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

KEY WORDS: National Lok Adalat, Mysore, court, pending cases, disposed of.

National Lok Adalat: Total 7,268 pending cases disposed of.

The post ರಾಷ್ಟ್ರೀಯ ಲೋಕ್ ಅದಾಲತ್‌  : ಒಟ್ಟು 7,268 ಬಾಕಿ  ಪ್ರಕರಣಗಳು ಇತ್ಯರ್ಥ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളം കാത്തിരുന്നത് പത്ത് ദിവസം; ഒടുവില്‍ മുഖ്യമന്ത്രിയെ ഇന്ന് പ്രഖ്യാപിക്കാനൊരുങ്ങി കോണ്‍ഗ്രസ്

തിരുവനന്തപുരം: ദിവസങ്ങള്‍ നീണ്ട അനിശ്ചിതത്വങ്ങള്‍ക്കൊടുവില്‍ കേരളത്തിന്റെ പുതിയ മുഖ്യമന്ത്രി ആരെന്ന് ഇന്ന്...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ...