27
August, 2026

A News 365Times Venture

27
Thursday
August, 2026

A News 365Times Venture

ಕುತೂಹಲ ಮೂಡಿಸಿದ ಕೇಂದ್ರ ಸಚಿವ ಹೆಚ್.ಡಿಕೆ ಮತ್ತು ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್

Date:

ನವದೆಹಲಿ,ಮಾರ್ಚ್,26,2025 (www.justkannada.in): ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರೀ ಸಂಚಲನ ಮೂಡಿಸಿರುವ ನಡುವೆಯೇ  ಇದೀಗ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದಿದೆ. ಹೌದು, ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ನಿನ್ನೆ ನವದೆಹಲಿಯಲ್ಲಿ ಡಿನ್ನರ್ ನಲ್ಲಿ ಭಾಗಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನವದೆಹಲಿಯ ನಿವಾಸದಲ್ಲಿ ಈ ಡಿನ್ನರ್ ಮೀಟಿಂಗ್ ಆಯೋಜಿಸಲಾಗಿದ್ದು,ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮನೆಗೆ ಆಹ್ವಾನಿಸಿದ್ದರು ಎಂದು ಹೇಳಲಾಗಿದೆ.

ಡಿನ್ನರ್ ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಡಿನ್ನರ್ ಗೆ ಕರೆದಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Key words: Union Minister, HDK, Minister, Sathish Jarkiholi, dinner meeting

The post ಕುತೂಹಲ ಮೂಡಿಸಿದ ಕೇಂದ್ರ ಸಚಿವ ಹೆಚ್.ಡಿಕೆ ಮತ್ತು ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Karnataka: ఆకస్మిక తనిఖీలో షాకింగ్ సీన్.. ఆస్పత్రి రూమ్‌లో ప్రియురాలితో అడ్డంగా బుక్కైన..!

కర్ణాటకలో ఓ న్యాయమూర్తికి షాకింగ్ ఘటన ఎదురైంది. ఆస్పత్రిలోని ఓ గదిలో...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ...

യു.എന്‍.ആര്‍.ഡ.ബ്ല്യു.എ പരിശീലന കേന്ദ്രം പിടിച്ചെടുത്ത ഇസ്രഈല്‍ നടപടിയെ അപലപിച്ച് ബ്രിട്ടിഷ് മന്ത്രി

ജെറുസലേം: യു.എന്‍ ഏജന്‍സിയായ യുനൈറ്റഡ് നേഷന്‍സ് റിലീഫ് ആന്‍ഡ് വര്‍ക്‌സ് ഏജന്‍സി...

Nepal Flood: நேபாளத்தில் கடும் வெள்ள பெருக்கு; பலி எண்ணிக்கை 46-ஆக அதிகரிப்பு!| Live Updates

நேபாளத்தில் கடும் வெள்ளம் - முதல்வர் அறிக்கை!நேபாளத்தில் கடும் வெள்ள பாதிப்பு...