23
November, 2026

A News 365Times Venture

23
Monday
November, 2026

A News 365Times Venture

ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಕಮಿಷನ್ ಕೇಳಿದ್ರೆ ಲೋಕಾಯುಕ್ತರಿಗೆ ದೂರು ನೀಡಲಿ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಏಪ್ರಿಲ್,11,2025 (www.justkannada.in):  ಬಾಕಿ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಇಬ್ಬರು ಸಚಿವರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್,   ಬಿಲ್ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಯಾಕೆ ಸಚಿವರನ್ನು ಕೇಳಬೇಕು. ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

‘ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಒಂದು ವರ್ಷ ಮುಂಚಿತವಾಗಿಯೇ ನಾವು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೆವು. ಅನುದಾನ ಇಲ್ಲದೆ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು. ಆದರೂ ನಮ್ಮ ಮಾತು ಕೇಳದೆ ಈಗ ರಾಜಕೀಯ ನಾಯಕರ ಮೂಲಕ ಬಿಲ್ ಪಾವತಿಗೆ ಮನವಿ ಪತ್ರ ನೀಡುತ್ತಿದ್ದಾರೆ’ ಎಂದು ಡಿಕೆ ಶಿವಕುಮಾರ್ ಹೇಳಿದರು.

ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,   ಜಾತಿಗಣತಿ ವರದಿ ಕ್ಯಾಬಿನೆಟ್ ನಲ್ಲಿ ಜಸ್ಟ್ ಓಪನ್ ಮಾಡಲಾಗಿದೆ. ವರದಿಯನ್ನು ಇನ್ನೂ ಯಾರೂ ನೋಡಿಲ್ಲ.  ಮುಂದೆ ಎಲ್ಲರಿಗೂ ಕೊಡ್ತಾರೆ. ಈ ಬಗ್ಗೆ ಕುಳಿತು ಪ್ರತ್ಯೇಕ ಚರ್ಚೆ ಮಾಡುತ್ತೇವೆ. ನಾವು ಆ ರೀತಿಯ ತೀರ್ಮಾನ ಮಾಡೋಕೆ ಆಗಲ್ಲ ಎಂದರು.

Key words: commission, complain, contractors, Lokayukta,  DCM, DK Sivakumar

The post ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಕಮಿಷನ್ ಕೇಳಿದ್ರೆ ಲೋಕಾಯುಕ್ತರಿಗೆ ದೂರು ನೀಡಲಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനില്‍ ഊര്‍ജ പ്രതിസന്ധി: വൈദ്യുതി നിയന്ത്രണം പ്രോത്സാഹിപ്പിക്കാന്‍ ഇരുട്ടത്തിരുന്ന് ജോലി ചെയ്ത് പെസസ്‌കിയാന്‍

ടെല്‍അവീവ്: രാജ്യത്തെ പ്രധാന അടിസ്ഥാന സൗകര്യങ്ങള്‍ക്ക് നേരെയുണ്ടായ നാശനഷ്ടങ്ങളെ തുടര്‍ന്ന് ഊര്‍ജ...

'5 ரூபாய் எக்ஸ்ட்ரா கொடுத்தால்தான் சரக்கு'- டாஸ்மாக் கடை பேடிஎம் மெஷினைத் தூக்கிக்கொண்டு ஓடிய இளைஞன்

ராணிப்பேட்டை மாவட்டம், லாலாப்பேட்டை பகுதியில் அரசுக்குச் சொந்தமான டாஸ்மாக் மதுபானக் கடை...

Kartik Purnima 2026: కార్తీక పౌర్ణమి నాడు చంద్రుడికి అర్ఘ్యం.. సరైన టైమ్ ఇదే.!

హిందూ ధర్మంలో కార్తీక పౌర్ణమికి చాలా ప్రత్యేకమైన ప్రాముఖ్యత ఉంది. ఈ...