26
August, 2026

A News 365Times Venture

26
Wednesday
August, 2026

A News 365Times Venture

ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯ ಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು ಏಪ್ರಿಲ್, 21,2025 (www.justkannada.in):  ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ  ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸಮಾಜದ ನಾಲ್ಕೂ ಅಂಗಗಳಾದ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗದ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ. ಸಂವಿಧಾನದ ಆಶಯದಂತೆ ಜಾತ್ಯತೀತ ಸಮಾಜ ನಿರ್ಮಿಸಿ, ಜಾತಿ ಅಸಮಾನತೆಯನ್ನು ಅಳಿಸುವುದಾಗಿದೆ ಎಂದರು.

ಬುದ್ದ, ಬಸವ, ಗಾಂಧಿ ಹೇಳಿದ್ದನ್ನೇ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಇವರೆಲ್ಲರ ಆಶಯದಂತೆ ನಾವು  ಸಂವಿಧಾನ ಪಾಲಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.

5.5 ಲಕ್ಷ ಸರ್ಕಾರಿ ನೌಕರರಿಗೆ ಇವತ್ತಿನ ಪ್ರಶಸ್ತಿ ಪುರಸ್ಕೃತರು ಸ್ಫೂರ್ತಿಯಾಗಬೇಕು. ಪ್ರಶಸ್ತಿ ಪುರಸ್ಕೃತರ ಜವಾಬ್ದಾರಿ ಈಗ ಹೆಚ್ಚಾಗಿದೆ. ಹೀಗಾಗಿ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಪ್ರಜ್ಞೆ ಹೆಚ್ಚಿಸಿಕೊಂಡು ಜನರ ಸೇವೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದರು.

ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದ ಹೊರತು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಹೀಗಾಗಿ ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

Key words: State Government Employees Day , honest, CM Siddaramaiah

The post ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯ ಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

'35 நிமிட விவாதம்; கப்சிப் உதயநிதி; பரந்தூரை தாங்கும் தங்கம் தென்னரசு! – பின்னணி என்ன?

சட்டமன்றத்தில் நடந்து வரும் மானியக் கோரிக்கை விவாதத்தின் போது பரந்தூர் விமான...

Tamil Nadu: పొట్టి దుస్తుల వైరల్ వీడియోపై మహిళ ఆవేదన.. బాధ్యతగా ఉండాలని విజ్ఞప్తి

తమిళనాడు రాజకీయాల్లో సోషల్ మీడియాలో వైరల్ అయిన ఓ వీడియో తీవ్ర...

225 ಗ್ರೇಡ್-1 ಪಂಚಾಯತ್ ಕಾರ್ಯದರ್ಶಿಗಳಿಗೆ PDO ಹುದ್ದೆಗೆ ಬಡ್ತಿ: ಕೌನ್ಸಿಲಿಂಗ್

ಬೆಂಗಳೂರು,ಆಗಸ್ಟ್,25,2026 (www.justkannada.in): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ...

ഒണ്ടാരിയോ തടാകത്തിന്റെ പേര് ‘ലേക്ക് അമേരിക്ക’ എന്നാക്കുമെന്ന് ട്രംപ്

വാഷിങ്ടണ്‍: യു.എസ്- കാനഡ വ്യാപാര തര്‍ക്കം ശക്തമാവുന്നതിനിടെ ഒണ്ടാരിയോ തടാകത്തിന്റെ പേരുമാറ്റുമെന്ന...