26
March, 2026

A News 365Times Venture

26
Thursday
March, 2026

A News 365Times Venture

“ವೃತ್ತಿ ಧರ್ಮ” ಮರೆತ ರಾಷ್ಟ್ರೀಯ ವಾಹಿನಿಗಳ ಮುಖಕ್ಕೆ ಮಂಗಳಾರತಿ ಎತ್ತಿದ್ದ ಸಿಎಂ ಸಿದ್ದರಾಮಯ್ಯ.!

Date:

ಬೆಂಗಳೂರು, ಏ.೨೨,೨೦೨೫:  ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ,  ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಟ್ಟಾರೆ ಟ್ವೀಟ್‌ ಹೀಗಿದೆ…

ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ.

ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ.

ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ.

ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದಿದ್ದಾರೆ.

key words: Cm Siddaramaiah, criticized, national channels, ‘professional ethics’

Cm Siddaramaiah criticized national channels for forgetting ‘professional ethics’

The post “ವೃತ್ತಿ ಧರ್ಮ” ಮರೆತ ರಾಷ್ಟ್ರೀಯ ವಾಹಿನಿಗಳ ಮುಖಕ್ಕೆ ಮಂಗಳಾರತಿ ಎತ್ತಿದ್ದ ಸಿಎಂ ಸಿದ್ದರಾಮಯ್ಯ.! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್  ಟೀಕೆ

ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ...

ഇറാന്റെ തിരിച്ചടിയില്‍ സൈനിക താവളങ്ങള്‍ തകര്‍ന്നു; ഹോട്ടലുകളില്‍ അഭയം തേടി അമേരിക്കന്‍ സൈന്യം; റിപ്പോര്‍ട്ട്

വാഷിങ്ടണ്‍: ഇറാന്റെ പ്രത്യാക്രമണത്തില്‍ സൈനിക താവളങ്ങള്‍ തകര്‍ന്നതോടെ, പശ്ചിമേഷ്യയിലെ യു.എസ് സേന...

"நாங்கள் சிரித்துக்கொண்டே அழுகிறோம்.!"- திமுக-வின் தொகுதிப் பங்கீடு குறித்து மதிமுக அர்ஜுனராஜ்

திமுக தங்களுக்கு கொடுத்த எண்ணிக்கை, சின்னம் தொடர்பாக தங்களுக்கு வருத்தம் உள்ளதாக...

Karnataka: క్లాస్‌లోనే విద్యార్థినికి ప్రొఫెసర్ ‘‘ఐ లవ్ యూ’’.. ఆ తర్వాత ఏం జరిగిందంటే..

Karnataka: బాధ్యతాయుతమైన ప్రొఫెసర్ హోదాలో ఉన్న ఒక వ్యక్తి నీచంగా ప్రవర్తించాడు....