26
March, 2026

A News 365Times Venture

26
Thursday
March, 2026

A News 365Times Venture

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

Date:

ಬೆಂಗಳೂರು, ಮೇ,1,2025 (www.justkannada.in): ನಾಳೆ ರಾಜ್ಯ ಎಸ್ ಎಸ್ ಎಲ್ ಸಿ ಪರೀಕ್ಷೆ  ಫಲಿತಾಂಶ ಪ್ರಕಟವಾಗಲಿದೆ.

ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ  ಹೆಚ್.ಬಸವರಾಜೇಂದ್ರ ಅವರು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ  ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ  ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಮಧ್ಯಾಹ್ನ 12.30ರ ಬಳಿಕ ಫಲಿತಾಂಶ ಪ್ರಕಟವಾಗಲಿದ್ದು,  ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.

Key words: SSLC exam, result, declare, tomorrow

The post ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോർമുസ് കടലിടുക്കിൽ സാഹചര്യങ്ങൾ പഴയപോലെയാകില്ല: ഇറാൻ

ടെഹ്‌റാൻ: ഹോർമുസ് കടലിടുക്കിലെ സാഹചര്യം പഴയപടിയാകില്ലെന്ന് ഇറാൻ സൈന്യത്തിന്റെ ഖാത്തം അൽ-അൻബിയ...

பாபநாசம் தொகுதி அமமுக-வுக்கு இல்லை; ரூட் போடும் வைத்தி! – திமுகவில் இணைகிறாரா டிடிவி விசுவாசி?

அமமுக-வின் துணை பொதுச்செயலாளர் எம்.ரெங்கசாமி. டி.டி.வி.தினகரனுக்கு அடுத்தபடியாக டெல்டா அமமுக-வின் முகமாக...

KSOU ನಲ್ಲಿ ಲಂಚ-ಭ್ರಷ್ಟಾಚಾರ: ಬ್ಯಾಂಕ್ ಖಾತೆಗಳು ಸ್ಥಗಿತಕ್ಕೆ ಸರ್ಕಾರದ ಆದೇಶ

  ಬೆಂಗಳೂರು,March.25,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU)ದಲ್ಲಿ ಲಂಚ ಹಾಗೂ...