26
March, 2026

A News 365Times Venture

26
Thursday
March, 2026

A News 365Times Venture

ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್: ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ- ಪರಮೇಶ್ವರ್

Date:

ಬೆಂಗಳೂರು, ಮೇ 3,2025 (www.justkannada.in): ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಇಂದು ಸಭೆ ನಡೆಸಿದ ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು. ಹಾಗೆಯೇ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇಂದು ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಮುಸ್ಲೀಂ ಮುಖಂಡರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್  ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕವಾಗಿ ಆಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು. ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೇರಳ ಮೂಲದ ಅಶ್ರಫ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಯಾವುದೇ ಸಮುದಾಯದವರು ಆಗಲೀ, ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ. ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಪಟ್ಟ 8 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಎರಡು ವಾರಗಳಲ್ಲಿ ಆರಂಭವಾಗಲಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.

Key words: Anti-Communal Task Force, Home Minister, Parameshwar

The post ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್: ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ- ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೈಕಮಾಂಡ್ ಒಪ್ಪಿದ್ರೆ ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ಹೈಕಮಾಂಡ್ ಒಪ್ಪಿದರೇ ನಾನೇ ಬಜೆಟ್ ಮಂಡಿಸುತ್ತೇನೆ ಎಂದು...

കേരളത്തില്‍ സി.ജെ.പി സഖ്യം; ബി.ജെ.പിക്ക് നല്‍കുന്ന വോട്ട് എല്‍.ഡി.എഫിന് നല്‍കുന്നതിന് തുല്യം: ഖാര്‍ഗെ

കോഴിക്കോട്: കേരളത്തില്‍ ഇടതുപക്ഷവും ബി.ജെ.പിയുമായി സി.ജെ.പി സഖ്യമാണെന്നും, ബി.ജെ.പി മത്സരിക്കുന്നത് എല്‍.ഡി.എഫിന്റെ...

எம்.ஜி.ஆருக்கு முன் தமிழக சட்டமன்றம் சென்ற முதல் நடிகர்; யார் தெரியுமா?

திரைத்துறையிலிருந்து தமிழக சட்டமன்றத்திற்குச் சென்ற முதல் நபர் என்றவுடன் நம் நினைவுக்கு...

Yadadri: భార్యపై కోపం.. కన్న కూతురిని పొట్టన పెట్టుకున్న కసాయి తండ్రి..

ఆ చిన్నారికి రెండేళ్లకే నూరేళ్లూ నిండిపోయాయి. కన్న తండ్రి ఘాతుకానికి బలైంది....