24
September, 2026

A News 365Times Venture

24
Thursday
September, 2026

A News 365Times Venture

ತಾಯಿ ಚಾಮುಂಡೇಶ್ವರಿ ಜನ್ಮೋತ್ಸವ, ಆಷಾಢ ಶುಕ್ರವಾರ: ಅಗತ್ಯ ಪೂರ್ವ ಸಿದ್ಧತೆಗೆ ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ

Date:

ಮೈಸೂರು,ಮೇ, 7,2025 (www.justkannada.in): ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ಹಾಗೂ ಆಷಾಢ ಶುಕ್ರವಾರಗಳ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿ ಜಿ .ಲಕ್ಷ್ಮೀಕಾಂತ ರೆಡ್ಡಿ  ಸೂಚಿಸಿದರು.

ಇಂದು ಜಿಲ್ಲಾ ಪಂಚಾಯತ್ ಡಿ ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ ಆಷಾಡ ಮಾಸದ 4 ಶುಕ್ರವಾರಗಳು ಮತ್ತು ಅಮ್ಮನವರ ಜನ್ಮೋತ್ಸವ ಪ್ರಯುಕ್ತ ಪೂರ್ವ  ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಷಾಢ ಶುಕ್ರವಾರ ಹಾಗೂ ವರ್ಧಂತಿ ದಿನಗಳಂದು ಯಾವುದೇ ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ಇರುವುದಿಲ್ಲ. ವಾಹನಗಳನ್ನು ಲಲಿತಾ ಮಹಲ್ ಹೊಟೆಲ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬೇಕು.  ಭಕ್ತಾದಿಗಳಿಗೆ ಸಾರ್ವಜನಿಕ ವಾಹನ ವ್ಯವಸ್ಥೆ ಮಾಡಲಾಗುವುದು.

ಜೂನ್ 27, ಜುಲೈ 04, ಜುಲೈ 11, ಜುಲೈ 18 ರಂದು ನಾಲ್ಕು ಆಷಾಢ ಶುಕ್ರವಾರಗಳು ಹಾಗೂ ಜುಲೈ 17 ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಬೇಕು. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಚತೆ ಮಾಡಬೇಕು. ಚೆಸ್ಕಾಂ ವತಿಯಿಂದ 1000 ಮೆಟ್ಟಿಲುಗಳ ಬಳಿಯಿರುವ ವಿದ್ಯುತ್ ದೀಪಗಳ ದುರಸ್ತಿ ಹಾಗೂ ಬೆಟ್ಟದ ದೇವಾಲಯಗಳಿಗೆ ದೀಪಾಲಂಕಾರ ಮಾಡಬೇಕು ಎಂದು ತಿಳಿಸಿದರು.

ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತವಾಗಿದ್ದು,  ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300 ರೂ. ಗಳ ಟಿಕೆಟ್ ನಿಗದಿ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸಿಫ್, ಡಿಸಿಪಿ ಮುತ್ತುರಾಜ್, ಚಾಮುಂಡೇಶ್ವರಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words:, Ashada Friday, Mysore DC, Laxmikant Reddy, preparations

The post ತಾಯಿ ಚಾಮುಂಡೇಶ್ವರಿ ಜನ್ಮೋತ್ಸವ, ಆಷಾಢ ಶುಕ್ರವಾರ: ಅಗತ್ಯ ಪೂರ್ವ ಸಿದ್ಧತೆಗೆ ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഓസ്‌ട്രേലിയന്‍ സര്‍ക്കാര്‍ ഹെല്‍ത്ത് കെയര്‍ ഡാറ്റാബേസ് ഹാക്ക് ചെയ്ത് ഓപ്പണ്‍ എ.ഐ ഏജന്റ്: അറിഞ്ഞത് മാസങ്ങള്‍ക്കുശേഷം

ന്യൂയോര്‍ക്ക്: ഓസ്‌ട്രേലിയയുടെ ആരോഗ്യവകുപ്പിന്റെ വെബ്‌സൈറ്റ് ഹാക്ക് ചെയ്ത് സ്വകാര്യഡാറ്റയിലേക്ക് നുഴഞ്ഞുകയറി ഓപ്പണ്‍...

தேர்தல் ஆணையம்: “இதனால்தான் இந்த விவகாரம் சர்ச்சையாகியுள்ளது..!" – முன்னாள் ஆணையர் சொல்வதென்ன?

தேர்தல் ஆணையத்தில் பெரும்பான்மை உறுப்பினர்களின் ஆதரவோ அல்லது ஒருமித்த கருத்தோ இன்றி...

AP Liquor Shops: లిక్కర్ షాపులపై కీలక నిర్ణయం.. ఇక రెన్యువల్ గడువు పొడిగింపు లేదు..!

AP Liquor Shops: ఆంధ్రప్రదేశ్‌లో 2026–27 ఎక్సైజ్ సంవత్సరానికి ఏ4 మద్యం...

കുടുംബ കലഹങ്ങള്‍ വേണ്ട; എ.ഐ ക്യാമറ നിയമ ലംഘന നോട്ടീസുകളില്‍ ചിത്രങ്ങള്‍ ഒഴിവാക്കാന്‍ എം.വി.ഡി

തിരുവനന്തപുരം: മോട്ടോര്‍ വാഹന വകുപ്പിന്റെ എ.ഐ ക്യാമറകള്‍ വഴിയുള്ള നിയമലംഘനങ്ങള്‍ പരിശോധിക്കുന്നതിനുള്ള...